ಮುಂಬೈ:
ಹಿಂದುತ್ವವಾದ ಮಂಡಿಸಿ ತಾವು ಹುಟ್ಟಿಸಿದ್ದ ರಾಮ ಮಂದಿರ ನಿರ್ಮಾಣದ ಆಸೆ ,ಗುಜರಾತನಲ್ಲಿನ ಪ್ರತಿಮೆ ಸ್ಥಾಪನೆ ಹಾಗೂ ಹಲವು ನಗರಗಳ ಹೆಸರು ಬದಲಾವಣೆಯೇ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸಂಜಯ್ ಕಾಕಡೆ ಅವರು ಹೇಳಿದ್ದಾರೆ.
ಮಧ್ಯ ಪ್ರದೇಶ, ರಾಜಸ್ಥಾನ. ಛತ್ತೀಸ್ ಗಢ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಐದು ರಾಜ್ಯಗಳಲ್ಲೂ ಬಿಜೆಪಿ ಹಿನ್ನಡೆ ಅನುಭವಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








