ಬಿಜೆಪಿ ಹೊರಗಿಡಲು ಅಗತ್ಯವಿರುವೆಡೆ ಹೊಂದಾಣಿಕೆಗೆ ಸಿದ್ಧ : ಹೆಚ್ ಡಿಡಿ

ಚಿಕ್ಕಮಗಳೂರು:

      ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರವಿದೆ. ಅತಂತ್ರವಾಗಿರುವ ಸ್ಥಳೀಯ ಸಂಸ್ಥೆಗಳಲ್ಲಿ  ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಬಿಜೆಪಿಯನ್ನು ಹೊರಗಿಟ್ಟು ಹೊಂದಾಣಿಕೆ ಮಾಡಿಕೊಳ್ಳಲಾಗುವುದು ಎಂದು ಜೆಡಿಎಸ್‌ ವರಿಷ್ಟ ಎಚ್‌. ಡಿ ದೇವೇಗೌಡ ಹೇಳಿದ್ದಾರೆ. 

      ಚಿಕ್ಕಮಗಳೂರಿನ ಕಡೂರು ತಾಲೂಕಿನ ಯಗಟಿ ಗ್ರಾಮದಲ್ಲಿ ಇಂದು ನಡೆದ ವೈ.ಎಸ್​.ವಿ. ದತ್ತಾ ಅವರ ಪತ್ನಿ ದಿ. ನಿರ್ಮಲಾ ಅವರ ತರ್ಪಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದೇವೇಗೌಡ ಅವರು, ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. 

      ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲೆಂದೇ ನಾವು ಮೈತ್ರಿ ಮಾಡಿಕೊಂಡಿದ್ದೇವೆ, ಹಾಗಿದ್ದಾಗ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿ ಎಲ್ಲೆಲ್ಲಿ ಅತಂತ್ರ ಇರುತ್ತದೆಯೋ ಅಲ್ಲೆಲ್ಲಾ ಕಾಂಗ್ರೆಸ್ ಜೊತೆಯೇ ಮೈತ್ರಿ ಮಾಡಿಕೊಳ್ಳುತ್ತೇವೆ ಎಂದರು. ಇದು ಕೆಲ ಜಿಲ್ಲೆಗಳಲ್ಲಿ ನಡೆದ ಚುನಾವಣೆ, ಹಾಗಾಗಿ ಲೋಕಸಭೆ ಚುನಾವಣೆಗೆ ಇದು ದಿಕ್ಸೂಚಿ ಅಲ್ಲ ಎಂದು ತಿಳಿಸಿದರು. 

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap