ಬೆಂಗಳೂರು:
ಚುನಾವಣಾ ಆಯೋಗದ ಸೂಚನೆ ಬೆನ್ನಲ್ಲೇ ಚುನಾವಣೆಗೆ ಬಿಬಿಎಂಪಿ ಸಿದ್ಧತೆಗಳನ್ನು ಆರಂಭಿಸಿದೆ. 2024ರ ಜ.1ಕ್ಕೆ ಉಲ್ಲೇಖಿಸಿದಂತೆ ಜ.5ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಬೇಕಿದೆ. ಹೀಗಾಗಿ, ಚುನಾವಣೆ ಅಧಿಕಾರಿಗಳು, ಸಹಾಯಕ ಚುನಾವಣೆ ಅಧಿಕಾರಿಗಳು, ಮತಗಟ್ಟೆ ಅಧಿಕಾರಿಗಳಿಗೆ ಜೂನ್ 1ರಿಂದ ಜುಲೈ 20ರವರೆಗೆ ತರಬೇತಿ ನೀಡಲಾಗುತ್ತದೆ.
ಮತಗಟ್ಟೆ ಅಧಿಕಾರಿಗಳು ಜುಲೈ 21 ರಿಂದ ಆ.21ರ ವರೆಗೆ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಆ.22ರಿಂದ ಸೆ.29ರ ವರೆಗೆ ಮತದಾರರ ಪಟ್ಟಿ ಪರಿಷ್ಕರಣೆ, ಮತಗಟ್ಟೆಗಳ ಆಯ್ಕೆಯ ಚಟುವಟಿಕೆಗಳು ನಡೆಯಲಿವೆ. ಸೆ.30ರಿಂದ ಅ.16ರ ವರೆಗೆ ಮತದಾರರ ಪಟ್ಟಿಯ ಕರಡು ಪ್ರತಿ ಸಿದ್ಧತೆ ನಡೆಯಲಿದೆ. ಅ.17ರಂದು ಮತದಾರರ ಕರಡು ಪಟ್ಟಿ ಪ್ರಕಟಿಸಲಾಗುತ್ತದೆ. ಅ.17ರಿಂದ ನ.30ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ.