ತುಮಕೂರು:
ರಾಜ್ಯದ ಕೆಲವು ಭಾಗಗಳಲ್ಲಿ ಮಂಗಳವಾರ ಭಾರೀ ಮಳೆಯಾಗಿದ್ದು, ಸಾಕಷ್ಟು ಹಾನಿಯಾಗಿದೆ .ಇಂದು ಕೂಡ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಒಳನಾಡು ಜಿಲ್ಲೆಗಳು, ಕರಾವಳಿಯಲ್ಲಿ ಬಿರುಗಾಳಿ ಬೀಸಲಿದೆ.
ಇನ್ನು ಕೊಡಗು, ಚಿಕ್ಕಮಗಳೂರು ಹಾಗೂ ಹಾಸನದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ .ನಿನ್ನೆಯೂ ಮಲೆನಾಡಿನಲ್ಲಿ ಬಿರುಗಾಳಿ ಮಳೆಯಾಗಿದ್ದು, ಶಿವಮೊಗ್ಗದಲ್ಲಿ ಸಿಡಿಲು ಬಡಿದು ಮಹಿಳೆ ಮೃತಪಟ್ಟಿದ್ದಾರೆ. ಇನ್ನು ಮರಗಳು ಧರೆಗುರುಳಿ ಕಾರ್ ಜಖಂ ಆಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ