ಕಂಪ್ಲಿ
ಇಲ್ಲಿನ ಶಿಕ್ಷಕ ಬಿ.ಸೈಯ್ಯದ್ ಹುಸೇನ್ ಅವರಿಗೆ 2018-19ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದ್ದು ಇಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಜರುಗುವ ಶಿಕ್ಷಕ ದಿನಾಚರಣೆ ಸಮಾರಂಭದಲ್ಲಿ ಅವರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಶಿಕ್ಷಣ ಸಚಿವ ಎನ್.ಮಹೇಶ್‍ರವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.
ರಾಜ್ಯದ ಪ್ರೌಢಶಾಲಾ ವಿಭಾಗದ 10ಶಿಕ್ಷಕರಿಗೆ ನೀಡುವ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಸಾಲಿನಲ್ಲಿ ಕಲ್ಬುರ್ಗಿವಿಭಾಗ ಹಾಗೂ ಬಳ್ಳಾರಿ ಜಿಲ್ಲೆಯ ಪ್ರೌಢಶಾಲೆಗಳನ್ನು ಪ್ರತಿನಿಧಿಸಿದ ಸೈಯ್ಯದ್ ಹುಸೇನ್‍ರವರು ಪ್ರಶಸ್ತಿ ಸ್ವೀಕರಿಸುವ ಏಕೈಕ ಶಿಕ್ಷಕರಾಗಿ ಆಯ್ಕೆಯಾಗಿದ್ದಾರೆ.
ಇವರು ನಲ್ಲಾಪುರ ಶಾಲೆ, ಇಲ್ಲಿನ 4ನೇವಾರ್ಡ್ ಸರ್ಕಾರಿ ಹಿಪ್ರಾ ಶಾಲೆಗಳಲ್ಲಿ ಶಿಕ್ಷಕರಾಗಿ, ಎಸ.ಎನ್.ಪೇಟೆಯ ಕ್ಲಸ್ಟರ್‍ನ ಸಿಆರ್‍ಪಿಯಾಗಿ ಸೇವೆ ಸಲ್ಲಿದ್ದಾರೆ. ಪ್ರಮೋಷನ್ ದೊರೆತ ನಂತರ ದರೋಜಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸಿದ ಇವರು ಪ್ರಸ್ತುತದಲ್ಲಿ ಕಾರಿಗನೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಶಿಕ್ಷಕ ವೃತ್ತಿಯೊಡನೆ ಸಾಹಿತ್ಯಿಕ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ಸೈಯ್ಯದ್ ಹುಸೇನ್‍ರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದ್ದಕ್ಕಾಗಿ ಪ್ರೌಢಶಾಲಾ ಶಿಕ್ಷಕ ಸಂಘದ ತಾಲೂಕು ಮಾಜಿ ಅಧ್ಯಕ್ಷ ಎಸ್.ಜಿ.ಚಿತ್ರಗಾರ, ಡಾ.ಎಪಿಜೆ ಅಬ್ದುಲ್ ಕಲಾಂ ಸಾಂಸ್ಕøತಿಕ ವೇದಿಕೆ ಗೌರವಾಧ್ಯಕ್ಷ ಕೆ.ಎಂ.ಹೇಮಯ್ಯಸ್ವಾಮಿ, ಸಾಹಿತ್ಯ ಸಿರಿ ಪ್ರತಿಷ್ಠಾನದ ಕಾರ್ಯದರ್ಶಿ ಬಂಗಿದೊಡ್ಡ ಮಂಜುನಾಥ ಸೇರಿದಂತೆ ಅನೇಕರು ಶ್ಲಾಘಿಸಿದ್ದಾರೆ.