ಬೆಂಗಳೂರಿನಲ್ಲಿ : ಕನ್ನಡಾಂಬೆ ಭುವನೇಶ್ವರಿ ಕಂಚಿನ ಪ್ರತಿಮೆ

ಬೆಂಗಳೂರು

   ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಾಡದೇವಿ ಭುವನೇಶ್ವರಿ ಪ್ರತಿಮೆ ನಿರ್ಮಿಸಲು ಕನ್ನಡ ಮತ್ತು ಸಂಸ್ಕತಿ ಇಲಾಖೆ ತೀರ್ಮಾನಿಸಿದ್ದು, ಇನ್ನು ಮುಂದೆ ನಾಡದೇವಿ ?ಭುವನೇಶ್ವರಿ?ಗೆ ನಿತ್ಯ ಅರ್ಚನೆ ನೆರವೇರಲಿದೆ.

   ಕನ್ನಡಾಂಬೆಯ ಪ್ರತಿಮೆ ನಿರ್ಮಿಸಲು ಕನ್ನಡ ಮತ್ತು ಸಂಸ್ಕತಿ ಇಲಾಖೆ ವಿನೂತನ ಯೋಜನೆ ರೂಪಿಸಿದ್ದು, ಹದಿನಾಲ್ಕು ತಿಂಗಳಲ್ಲಿ ಪ್ರತಿಮೆಗೆ ಅಂತಿಮ ಸ್ಪರ್ಶ ದೊರಕಲಿದೆ.

   ಭುವನೇಶ್ವರಿ ತಾಯಿಯ ಕಂಚಿನ ಪ್ರತಿಮೆ ಸ್ಥಾಪಿಸುವ ಸಂಬಂಧ ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಈಗಾಗಲೇ ತಿಂಗಳಲ್ಲಿ ಎರಡು ಬಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಪ್ರತಿ ನಿರ್ಮಾಣ ಸಂಬAಧ ತುರ್ತು ಕ್ರಮವಹಿಸುವಂತೆ ಸೂಚಿಸಿದ್ದಾರೆ.

    25 ಅಡಿ ಕಂಚಿನ ಪ್ರತಿಮೆ: ಬೆಂಗಳೂರಿನ ಜೆ.ಸಿ.ರಸ್ತೆಯಲ್ಲಿರುವ ಕನ್ನಡ ಭವನದ ಆವರಣದಲ್ಲಿ ಸುಮಾರು 25 ಅಡಿ ಎತ್ತರದ ಕನ್ನಡಾಂಬೆಯ ಕಂಚಿನ ಪ್ರತಿಮೆ ನಿರ್ಮಾಣ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆ ಸ್ಥಳದಲ್ಲಿ ಪ್ರವಾಸಿಗರನ್ನು ಸೆಳೆಯುವಂತಹ ನಿಟ್ಟಿನಲ್ಲಿ ಉದ್ಯಾನವನ ನಿರ್ಮಾಣ ಹಾಗೂ ವಿಗ್ರಹದೊಂದಿಗೆ ಕನ್ನಡ ನಾಡಿನ ಸಾಂಸ್ಕತಿಕ ವೈಭವ, ಗತಕಾಲದ ಹೆಮ್ಮೆಯ ವಿಷಯಗಳನ್ನು ಪ್ರತಿಬಿಂಬಿಸುವ ಚಿತ್ರಣ ಇಲ್ಲಿರಲಿದ್ದು, ಅವು ಜನರಿಗೆ ಮಾಹಿತಿ ನೀಡಲಿವೆ.

     ಶಿಲ್ಪಿಗಳ ಜತೆ ಸಭೆ: ಈ ಸಂಬAಧ ವಿಕಾಸೌಧದ ತಮ್ಮ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಶಿಲ್ಪಿಗಳ ಜತೆ ಗುರುವಾರ ಸಚಿವರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಒಂದು ವರ್ಷದಲ್ಲಿ ಪ್ರತಿಮೆ ಕಾರ್ಯ ಪೂರ್ಣಗೊಂಡು ಮುಂದಿನ 2024ರ ನವೆಂಬರ್ 1ಕ್ಕೆ ಅನಾವರಣಗೊಳ್ಳಬೇಕು. ಮೊದಲಿಗೆ ಎರಡು ಅಡಿಯ ಕನ್ನಡಾಂಬೆಯ ಮಾದರಿ ಪ್ರತಿಮೆಯನ್ನು ನಿರ್ಮಿಸಿ ಕೊಡಬೇಕು. ನಂತರ ತ್ರಿಡಿ ಮಾದರಿಯ ಕನ್ನಡಾಂಬೆಯ ಪ್ರತಿಮೆ ನಿರ್ಮಾಣ ಮಾಡಲಾಗುವುದು. ಈ ಬಗ್ಗೆ ತುರ್ತು ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    ಕಲಾವಿದ ಕೆ.ಸೋಮಶೇಖರ್ ಸಿದ್ಧಪಡಿಸಿರುವ ನಾಡದೇವಿಯ ಚಿತ್ರವನ್ನು ಅಧಿಕೃತಗೊಳಿಸುವಂತೆ ಲಲಿತಾ ಅಕಾಡೆಮಿ ಅಧ್ಯಕ್ಷ ಡಿ.ಮಹೇಂದ್ರ ಅಧ್ಯಕ್ಷತೆಯ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಅದೇ ಮಾದರಿಯ ನಾಡದೇವಿಯ ಸುಮಾರು 25 ಅಡಿಯ ಪ್ರತಿಮೆ ತಲೆ ಎತ್ತಲಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap