ಬೆಂಗಳೂರಿನ ಅಭಿವೃದ್ಧಿಗೆ ಕೆಂಪೇಗೌಡರ ದೂರದೃಷ್ಟಿಯೇ ಕಾರಣ: ಸಿದ್ದರಾಮಯ್ಯ

ಬೆಂಗಳೂರು

     ಬೆಂಗಳೂರು ನಗರದ ಅಭಿವೃದ್ಧಿಗೆ ಕೆಂಪೇಗೌಡರ ದೂರದೃಷ್ಟಿಯೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ 514 ನೇ ಜಯಂತಿ ಕಾರ್ಯಕ್ರಮದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕೆಂಪೇಗೌಡರು ಒಬ್ಬ ದಕ್ಷ ಆಡಳಿತಗಾರರು.

    ಬೆಂಗಳೂರಿನ ಅಭಿವೃದ್ಧಿಗೆ ಸುಭದ್ರ ಅಡಿಪಾಯವನ್ನು ಹಾಕಿಕೊಟ್ಟಿದ್ದಾರೆ. ಆ ಕಾಲದಲ್ಲಿಯೇ ವಿವಿಧ ಜನಾಂಗಗಳ ವೃತ್ತಿ ಆಧರಿಸಿ ಪೇಟೆಗಳನ್ನು ನಿರ್ಮಿಸಿಕೊಟ್ಟಿದ್ದರು. ಅವರ ಆಡಳಿತ ನಮಗೆಲ್ಲ ಸ್ಫೂರ್ತಿ ಎಂದು ತಿಳಿಸಿದರು. ರಾಜ್ಯದಲ್ಲಿ ನಾಡಪ್ರಭು ಕೆಂಪೇಗೌಡರ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲಾ ಮಟ್ಟದಲ್ಲಿಯೂ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ.

    ಸರ್ಕಾರದ ಮಟ್ಟದಲ್ಲಿ ಕೆಂಪೇಗೌಡರ ಜಯಂತಿ ಆಚರಣೆ, ದೇವನಹಳ್ಳಿಯ ವಿಮಾನನಿಲ್ದಾಣಕ್ಕೆ ಅವರ ಹೆಸರು ಹಾಗೂ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ತೀರ್ಮಾನವನ್ನು ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಕೈಗೊಳ್ಳಲಾಯಿತು ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap