ಬೆಂಗಳೂರಿನ ಇಡಿ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ : ಇಡಿ ಕಚೇರಿಗೆ ನುಗ್ಗಲು ಪ್ರಯತ್ನಿಸಿದ ಕಾರ್ಯಕರ್ತರು

ಬೆಂಗಳೂರು : ಕಾಂಗ್ರೆಸ್ ಪಕ್ಷದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿರುವುದನ್ನು ಖಂಡಿಸಿ ಕೆಪಿಸಿಸಿ ವತಿಯಿಂದ ಶಾಂತಿನಗರದಲ್ಲಿರುವ ಇಡಿ (ಜಾರಿ ನಿರ್ದೇಶನಾಲಯ) ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಇಡಿ ಸಮನ್ಸ್ ಹಿನ್ನೆಲೆಯಲ್ಲಿ ಸೋಮವಾರ ನವದೆಹಲಿಯಲ್ಲಿ ಇಡಿ ವಿಚಾರಣೆಗೆ ಹಾಜರಾದ ರಾಹುಲ್ ಗಾಂಧಿ ಎಐಸಿಸಿ ಕಚೇರಿಯಿಂದ ಸುಮಾರು 7 ಕಿ.ಮೀ. ಪಾದಯಾತ್ರೆ ನಡೆಸಿ ಇಡಿ ಕಚೇರಿ ತಲುಪಿದರು. ದೆಹಲಿಯಲ್ಲಿ ಇದು ಬೃಹತ್ ಪ್ರತಿಭಟನೆಯ ರೂಪ ಪಡೆದಿದೆ. ಹಾಗಾಗಿ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಇಡಿ ವಿಚಾರಣೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಇದರ ಹಿಂದೆ ದ್ವೇಷದ ರಾಜಕಾರಣ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಖಂಡಿಸಲಾಯಿತು.

ಟ್ರಾಫಿಕ್ ಜಾಮ್ : ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಹೆಚ್ಚಿನ ಕಾರ್ಯಕರ್ತರು ಜಮಾಯಿಸಿದ್ದರು. ಶಾಂತಿನಗರ, ಲಾಲ್ಬಾಗ್, ವಿಲ್ಸನ್ ಗಾರ್ಡನ್ ಸುತ್ತಮುತ್ತಲಿನ ಏರಿಯಾಗಳಲ್ಲಿ ಸೋಮವಾರ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಇಡಿ ಕಚೇರಿಗೆ ನುಗ್ಗಲು ಪ್ರಯತ್ನಿಸಿದ ಕಾರ್ಯಕರ್ತರು : ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಕೆಲವು ಕಾರ್ಯಕರ್ತರು ಇಡಿ ಕಚೇರಿಯೊಳಗೆ ನುಗ್ಗಲು ಪ್ರಯತ್ನ ಮಾಡಿದರು. ಕೂಡಲೇ ಪೆÇಲೀಸರು ಅವರನ್ನು ವಶಕ್ಕೆ ಪಡೆದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪ್ರತಿ ಪಕ್ಷಗಳನ್ನು ಹಣಿಯುವ ಕೆಲಸ ಮಾಡುತ್ತಿದೆ. ಇದರ ಭಾಗವಿಯೇ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿದೆ. ನಾವು ಇದನ್ನು ಇಲ್ಲಿಗೇ ಬಿಡುವುದಿಲ್ಲ. ಪ್ರತಿಭಟನೆ ಮುಂದುವರಿಸುತ್ತೇವೆ,” ಎಂದು ಶಿವಾಜಿನಗರ ಶಾಸಕ ರಿಜ್ವಾನ್ ಆರ್ಷದ್ ಹೇಳಿದರು.

ಬೆಂಗಳೂರಿನ ಇಡಿ ಕಚೇರಿ ಮುಂದೆ ನಡೆಸಿದ ಹೋರಾಟದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಸಹಿತ ಕೆಪಿಸಿಸಿ ಪದಾಧಿಕಾರಿಗಳು ಭಾಗವಹಿಸಿದ್ದರು.

Recent Articles

spot_img

Related Stories

Share via
Copy link
Powered by Social Snap