ಬೆಂಗಳೂರು: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಲಂಚ ಪ್ರಕರಣ ಸಂಬಂಧ ಬೆಂಗಳೂರು ಮಾಜಿ ಜಿಲ್ಲಾಧಿಕಾರಿ ಮಂಜುನಾಥ್ ಬಂಧನವಾಗಿದೆ.
ಎಸಿಬಿ ಅಧಿಕಾರಿಗಳು ಮುಂಜುನಾಥ್ ಬಂಧಿಸಿದ್ದಾರೆ. ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಂಚ ಸ್ವೀಕರಿಸುವ ವೇಳೆ ಅಧಿಕಾರಿಗಳು ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದರು. ಈ ವೇಳೆ ಜಿಲ್ಲಾಧಿಕಾರಿಗಳ ಸೂಚನೆ ಮೇರೆ ಲಂಚ ನೀಡಿರುವುದಾಗಿ ಹೇಳಿಕೆ ನೀಡಿದ್ದರು. ಹೀಗಾಗಿ ಈ ಪ್ರಕರಣ ಐಎಸ್ ಅಧಿಕಾರಿ ಮಂಜುನಾಥ್ ಕಡೆ ತಿರುಗಿತ್ತು.
ಎಸಿಬಿ ಅಧಿಕಾರಿಗಳು ಈಗಾಗಗಲೇ ಮಂಜುನಾಥ್ ಕರೆಸಿ ವಿಚಾರಣೆ ನಡೆಸಿದ್ದರು. ವಿಚಾರಣೆಯಲ್ಲಿ ನೀಡಿದ ಹೇಳಿಕೆಗೆ ಆಧರಿಸಿ ತನಿಖೆ ಮುಂದುವರಿಸಿದ ಅಧಿಕಾರಿಗಳಿಗೆ ಮಹತ್ವದ ಸಾಕ್ಷ್ಯ ಲಭ್ಯವಾಗಿತ್ತು. ಇದರ ಹಿನ್ನಲೆಯಲ್ಲಿ ಮುಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಯಾವುದೇ ತನಿಖೆ ಇದ್ದರೂ ಕಾನೂನಿನ ಪ್ರಕಾರವೇ ನಡೆಯಲಿದೆ. ವ್ಯಕ್ತಿ ಎಷ್ಟೇ ಪ್ರಭಾವಿಯಾಗಿದ್ದರೂ ಕಾನೂನಿಗೆ ತಲೆಬಾಗಲೇ ಬೇಕು. ಸಾಕ್ಷಿ ಆಧಾರಗಳನ್ನು ಇಟ್ಟುಕೊಂಡು ಅಧಿಕಾರಿಗಳು ಬಂಧನ ಮಾಡಿದ್ದಾರೆ. ಕರ್ನಾಟಕ ಸರ್ಕಾರ ಕಾನೂನು ಉಲ್ಲಂಘಿಸುವರಿಗೆ ತಕ್ಕ ಪಾಠ ಕಲಿಸಲಿದೆ.
ಬೊಮ್ಮಾಯಿ, ಮುಖ್ಯಮಂತ್ರಿ
ಈ ರೀತಿ ಭ್ರಷ್ಟಾಚಾರ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಈ ಹಿಂದಿನ ಸರ್ಕಾರಗಳು ಅದನ್ನು ಬಹಿರಂಗ ಪಡಿಸಿರಲಿಲ್ಲ. ಆದರೆ ಬಿಜೆಪಿ ಸರ್ಕಾರ ಯಾವುದೂ ಮುಚ್ಚಿಡಲ್ಲ. ಭ್ರಷ್ಟಾಚಾರ ನಡೆಸಿದ ಅಧಿಕಾರಿಯನ್ನು ದಾಳಿ ಮಾಡಿ ಬಂಧಿಸಿದ್ದಾರೆ. ಆದೇಶ ಎಲ್ಲಾ ಸಮಯದಲ್ಲೂ ಕೊಡುತ್ತಾ ಬಂದ್ದೇವೆ.
ಅರಗ ಜ್ಞಾನೇಂದ್ರ, ಗೃಹ ಸಚಿವ.
