ಬೆಂಗಳೂರು:
ಡೈರಿ ಸರ್ಕಲ್ ನ ಮಹಾಲಿಂಗೇಶ್ ಬಡಾವಣೆಯ ಪೋಲಮಸ್ ಹೋಟೆಲ್ನಲ್ಲಿ ಸಿಲಿಂಡರ್ ಸ್ಫೋಟಗೊಂಡು ದುರಂತ ಸಂಭವಿಸಿದೆ.
ಸ್ಫೋಟದ ರಭಸಕ್ಕೆ ಹೋಟೆಲ್ ಶೆಟರ್ ಮುಂದೆ ಮಲಗಿದ್ದ ವೃದ್ಧ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅಲ್ಲದೆ, ಹೋಟೆಲ್ನಲ್ಲಿದ್ದ ಇಬ್ಬರು ಸಿಬ್ಬಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.
ಪೋಲಮಸ್ ಹೋಟೆಲ್ನಲ್ಲಿದ್ದ ಕಮರ್ಷಿಯಲ್ ಸಿಲಿಂಡರ್ ಬ್ಲಾಸ್ಟ್ ಆಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ಸದ್ಯ ಸ್ಥಳಕ್ಕೆ ಆಡುಗೋಡಿ ಪೊಲೀಸರು, ಅಗ್ನಿಶಾಮಕ ದಳ ಭೇಟಿ ನೀಡಿದ್ದು, ಹೋಟೆಲ್ನಲ್ಲಿ ಬೆಂಕಿ ನಂದಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ