ಬೆಳಗಾವಿ:
ಬೆಳಗಾವಿ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರಖಂಡ್ರೆ ಅವರು ಸ್ಪಷ್ಟ ಪಡಿಸಿದರು.
ಬೆಳಗಾವಿಯ ಜಿಲ್ಲಾ ಕಾಂಗ್ರೆಸ್‍ನಲ್ಲಿ ಉಂಟಾಗಿದ್ದ ನಾಯಕರ ಕಚ್ಚಾಟವನ್ನು ಶಮನಗೊಳಿಸಲಾಗಿದೆ. ಪಿಎಲ್‍ಡಿ ಬ್ಯಾಂಕ್ ಚುನಾವಣೆಯು ಪಕ್ಷದ ಚುನಾವಣೆಯಲ್ಲ. ಅದು ವೈಯಕ್ತಿಕ ಚುನಾವಣೆಯಾಗಿದ್ದು, ಇದರಲ್ಲಿ ಶಾಸಕಿ ಲಕ್ಷ್ಮೀಹೆಬ್ಬಾಳ್ಕರ್ ಅವರ ಬೆಂಬಲಿಗರಾದ ಮಹದೇವ್ ಪಾಟೀಲ್ ಅವರು ಅದ್ಯಕ್ಷರಾಗಿ ಮತ್ತು ಉಪಾಧ್ಯಕ್ಷರಾಗಿ ಬಾಬು ಸಾಹೇಬ್ ಜಾಮನ್ದಾರ್ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಜಾರಕಿಹೊಳಿ ಬೆಂಬಲಿಗರು ನಾಮಪತ್ರ ಸಲ್ಲಿಸದ ಕಾರಣ. ಶಾಸಕಿ ಲಕ್ಷ್ಮಿಹೆಬ್ಬಾಳ್ಕರ್ ಅವರ ಬೆಂಬಲಿಗರು ನಾಮಪತ್ರ ಸಲ್ಲಿಸಿದ್ದರು. ಆಯ್ಕೆಗೊಂಡ ಇವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಈ ಚುನಾವಣೆಯಿಂದಾಗಿ ಜಾರಕಿಹೊಳಿ ಮತ್ತು ಶಾಸಕಿ ಲಕ್ಷ್ಮಿಹೆಬ್ಬಾಳ್ಕರ್ ಅವರ ನಡುವೆ ಸಣ್ಣಪುಟ್ಟ ಸಮಸ್ಯೆಗಳಿರುವುದು ಸಹಜ. ಆದರೆ, ಇದು ಮಿತಿಮೀರಿ ಹೋಗಿಲ್ಲ ಎಂದರು. ಶಾಸಕ ಸತೀಶ್ ಜಾರಕಿಹೊಳಿ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷದ ಹಿತ ಮುಖ್ಯ, ಪಕ್ಷದಲ್ಲಿ ಯಾವುದೇ ಬಣವಿಲ್ಲ ಎಂದು ಸ್ಪಷ್ಟಪಡಿಸಿದರು.
ಕಾರ್ಯಕರ್ತರ ಆಕ್ರೋಶ:
ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಳೆಸಿರುವುದು ಜಾರಕಿಹೊಳಿ ಸಹೋದರರು ಆದರೆ, ಇಂದು ಪೋಸ್ ಕೊಡಲು ಯಾರ್ಯಾರೋ ಬರುತ್ತಿದ್ದಾರೆ ಎಂದು ಶಾಸಕಿ ಲಕ್ಷ್ಮಿಹೆಬ್ಬಾಳ್ಕರ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಸ್ಪಷ್ಟನೆ ಕೊಡುವಂತೆ ಕಾರ್ಯಕರ್ತರಾದ ಆಯೇಷಾ ಮತ್ತು ಚಂದ್ರು ಮುಖಂಡರನ್ನು ಒತ್ತಾಯಿಸಿದರು.
ನಾನು ಶಿಸ್ತಿನ ಸಿಪಾಯ:
ನಾನು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ ಎಂದು ಶಾಸಕಿ ಲಕ್ಷ್ಮಿಹೆಬ್ಬಾಳ್ಕರ್ ಅವರು ತಿಳಿಸಿದರು. ನನ್ನ ಮತ್ತು ಜಾರಕಿ ಹೊಳಿ ಸಹೋದರರ ನಡುವೆ ಇದ್ದ ವಿವಾದ ಸುಖಾಂತ್ಯ ಕಂಡಿದೆ. ವೈಯಕ್ತಿಕ ಟೀಕೆ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ