ಬೆಳ್ಳಂಬೆಳಗ್ಗೆ ಅಗ್ನಿ ದುರಂತ :ಮಲಗಿದ್ದ 17 ಮಂದಿಯ ಸಜೀವ ದಹನ

ಹೋಟೆಲ್​ನಲ್ಲಿ ಕೇರಳದ 10 ಜನರ ಕುಟುಂಬ ಕೂಡ ಇಲ್ಲಿ ವಾಸ್ತವ್ಯ ಹೂಡಿತ್ತು. ಇವರಲ್ಲಿ ಒಬ್ಬರು ಮಹಿಳೆ ಹಾಗೂ ಮಗು ಬೆಂಕಿಗೆ ಆಹುತಿಯಾಗಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದರು. ಇದೀಗ17 ಮಂದಿ ಸುಟ್ಟು ಕರಕಲಾಗಿದ್ದಾರೆ ಎಂದು ಹೇಳಲಾಗಿದೆ. ಅಗ್ನಿಯ ಕೆನ್ನಾಲಗೆಯು ಹೋಟೆಲ್​ನ 40 ಕೊಠಡಿಗಳಿಗೂ ವ್ಯಾಪಿಸಿರುವ ಕಾರಣ ಸಾವು ನೋವು ಹೆಚ್ಚಾಗಿದೆ ಎಂದು ತಿಳಿದುಬಂದಿದೆ. 

   ಅಗ್ನಿ ಅವಘಡದ  ಸುದ್ದಿ ಕೇಳಿ ಅಗ್ನಿಶಾಮಕ ದಳದವರು ತಕ್ಷಣ ಸ್ಥಳಕ್ಕೆ ಆಗಮಿಸಿ, ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಈಗಾಗಲೆ  ಐವರನ್ನು ರಕ್ಷಿಸಲಾಗಿದ್ದು, ನಾಪತ್ತೆಯಾಗಿರುವ ಮೂವರು ಬೆಂಕಿಯಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ. 
  ಮೂಲಗಳು ತಿಳಿಸಿದಂತೆ ಶಾರ್ಟ್​ ಸರ್ಕ್ಯೂಟ್​ನಿಂದಾಗಿ ಬೆಳಗ್ಗೆ 4:30ರ ಸುಮಾರಿಗೆ ಹೋಟೆಲ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. 7ಗಂಟೆಯಷ್ಟೊತ್ತಿಗೆ  ಹೋಟೆಲ್​ನ 40 ಕೋಣೆಗಳವರೆಗೆ ಭಾರಿ ಪ್ರಮಾಣದಲ್ಲಿ ಬೆಂಕಿ ಹಾಗೂ ಹೊಗೆ ಹರಡಿದೆ. ಸದ್ಯ ಸ್ಥಳದಲ್ಲಿ 26 ಅಗ್ನಿಶಾಮಕ ಪಡೆ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. 
   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link