ಬೇರೆ ರಾಜ್ಯ‌ ಚುನಾವಣೆಗೆ ಡಿಕೆಶಿಯನ್ನು ಬಳಸಲು ಮುಂದಾದ ಕಾಂಗ್ರೆಸ್

ಹೈದರಾಬಾದ್‌

       ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷದಲ್ಲೀಗ ಉತ್ಸಾಹ ಹೆಚ್ಚಾಗಿರುವುದು ಕಂಡುಬಂದಿದೆ. ಕರ್ನಾಟಕದ ಚುನಾವಣೆ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರನ್ನು ಬೇರೆ ರಾಜ್ಯಗಳಲ್ಲಿ ಬಳಸಿಕೊಳ್ಳುವ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ತೆಲಂಗಾಣ ಕಾಂಗ್ರೆಸ್‌ ನಾಯಕರು ಡಿಕೆಶಿಗಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

     ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆಲುವಿಗಾಗಿ ಡಿಕೆಶಿ ಹಲವು ತಂತ್ರಗಳನ್ನು ರೂಪಿಸಿದ್ದರು. 40 ಪರ್ಸೆಂಟ್‌ ಕಮಿಷನ್‌, ಪೇಸಿಎಂ ನಂತಹ ಹಲವು ಕ್ಯಾಂಪೇನ್‌ಗಳನ್ನು ನಡೆಸಿ ಬಿಜೆಪಿ ವಿರುದ್ಧ ಸಮರ ಸಾರಿದ್ದರು. ಡಿಕೆಶಿಯೇ ಹೇಳುವ ಪ್ರಕಾರ, ಅವರು ಮೂರು ವರ್ಷಗಳಿಂದ ಪಕ್ಷದ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ್ದಾರೆ. ಕಾಂಗ್ರೆಸ್‌ ಗ್ಯಾರಂಟಿಗಳಿಂದ ಹಿಡಿದು ಹಲವು ಭರವಸೆಗಳನ್ನು ನೀಡಿ ಜನರನ್ನು ಸೆಳೆಯುವಲ್ಲಿ ಸಫಲರಾಗಿದ್ದಾರೆ. ಪ್ರಧಾನಿ ಮೋದಿ ಅಲೆಯ ನಡುವೆಯೂ ಡಿಕೆಶಿ ರೂಪಿಸಿದ ಪ್ರತಿತಂತ್ರಗಳು ಬಿಜೆಪಿಗೆ ಮಾರಕವಾಗಿ ಪರಿಣಮಿಸಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ.

    ಕರ್ನಾಟಕದ ಗೆಲುವು ಡಿಕೆ ಶಿವಕುಮಾರ್‌ ಅವರಿಗೆ ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ತಂದುಕೊಂಡಿದೆ. ಒಂದು ಕಡೆ ಹಿಂದುತ್ವ ಹಾಗೂ ಮೋದಿ ಅಲೆಯನ್ನೇ ಬಂಡವಾಳ ಮಾಡಿಕೊಂಡಿರುವ ಬಿಜೆಪಿಗೆ ಸೆಡ್ಡು ಹೊಡೆದು ಪಕ್ಷಕ್ಕೆ ಮರುಜೀವ ನೀಡುವಲ್ಲಿ ಡಿಕೆ ಶಿವಕುಮಾರ್‌ ಸಫಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಡಿಕೆಗಾಗಿ ಬೇಡಿಕೆ ಹೆಚ್ಚಾಗಿದೆ. ಹಿಂದಿ ಭಾಷಿಗ ರಾಜ್ಯಗಳಲ್ಲಿಯೂ ಡಿಕೆಶಿಯನ್ನು ಬಳಸಿಕೊಳ್ಳಲು ಕಾಂಗ್ರೆಸ್‌ ನಾಯಕರು ಬೇಡಿಕೆ ಇಡುತ್ತಿದ್ದಾರೆ.

 

    ಈ ವರ್ಷದ ಕೊನೆಯಲ್ಲಿ ಛತ್ತಿಸ್‌ಗಢ, ರಾಜಸ್ಥಾನ, ಮಧ್ಯ ಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಛತ್ತಿಸ್‌ಗಢ ಹಾಗೂ ರಾಜಸ್ಥಾನದಲ್ಲಿ ಕಾಂಗ್ರೆಸ್‌ ಅಧಿಕಾರಲ್ಲಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ತೆಲಂಗಾಣದಲ್ಲಿ ಕೆಸಿಆರ್‌ ನೇತೃತ್ವದ ಬಿಎಸ್‌ಆರ್‌ ಅಧಿಕಾರದಲ್ಲಿದೆ. ಮಧ್ಯಪ್ರದೇಶದಲ್ಲಿ ಅಧಿಕಾರ ವಿರೋಧಿ ಅಲೆ ಇದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಇನ್ನು ತೆಲಂಗಾಣದಲ್ಲಿ ಕಾಂಗ್ರೆಸ್‌ ಮತ್ತೆ ನೆಲೆಯನ್ನು ಭದ್ರಪಡಿಸಿಕೊಳ್ಳುತ್ತಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

    ತೆಲಂಗಾಣದಲ್ಲಿ ಕಾಂಗ್ರೆಸ್‌ ಮತ್ತೆ ನೆಲೆಯನ್ನು ಭದ್ರಪಡಿಸಿಕೊಳ್ಳುತ್ತಿದೆ. ಬಿಎಸ್‌ಆರ್‌ ಪಕ್ಷದ ಹಲವು ಪ್ರಮುಖ ನಾಯಕರು ಕಾಂಗ್ರೆಸ್‌ ಸೇರ್ಪಡೆಗೊಳ್ಳುತ್ತಿದ್ದಾರೆ. ನಿರ್ಮಲ್ ಮತ್ತು ಸಿಕಂದರಾಬಾದ್ ಜಿಲ್ಲೆಗಳ ಇಬ್ಬರು ಪ್ರಮುಖ ಪಕ್ಷದ ನಾಯಕರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರಿಂದ ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್‌ಎಸ್ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ. ಹಿರಿಯ ಬಿಆರ್‌ಎಸ್ ನಾಯಕ ಶ್ರೀಹರಿ ರಾವ್ ಮತ್ತು ಸಿಕಂದರಾಬಾದ್ ಹಿರಿಯ ನಾಯಕ ಎನ್ ಪ್ರಕಾಶ್ ಗೌಡ್ ಅವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್‌ ಸೇರಿದ್ದಾರೆ. ತೆಲಂಗಾಣದಲ್ಲಿ ಗೆಲುವು ಸಾಧಿಸಲು ಹಲವು ತಂತ್ರಗಳನ್ನು ಕಾಂಗ್ರೆಸ್‌ ರೂಪಿಸಿದೆ.

    ತೆಲಂಗಾಣದಲ್ಲಿ ಕಾಂಗ್ರೆಸ್‌ ಸಾರಥ್ಯವನ್ನು ಡಿಕೆ ಶಿವಕುಮಾರ್ ವಹಿಸಿಕೊಳ್ಳಬೇಕು. ಆ ಮೂಲಕ ತೆಲುಗು ಭಾಷಿಗ ರಾಜ್ಯದಲ್ಲಿ ಅವರ ತಂತ್ರಗಳನ್ನು ಬಳಸಿಕೊಂಡು ಕಾಂಗ್ರೆಸ್‌ಗೆ ಗೆಲುವು ತಂದುಕೊಡಬೇಕೆಂಬುದು ಅಲ್ಲಿನ ನಾಯಕರ ವಾದವಾಗಿದೆ. ಒಂದು ವೇಳೆ, ಕಾಂಗ್ರೆಸ್ ಹೈಕಮಾಂಡ್‌ ಡಿಕೆ ಅವರಿಗೆ ತೆಲಂಗಾಣ ಚುನಾವಣಾ ಸಾರಥ್ಯವನ್ನು ವಹಿಸಿದಲ್ಲಿ ಪಕ್ಷಕ್ಕೆ ದೊಡ್ಡ ಮಟ್ಟದಲ್ಲಿ ಸಹಾಯವಾಗಬಹುದು ಎಂದು ಪಕ್ಷದ ನಾಯಕರು ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಕೆ ಅವರಿಗೆ ಸಾರಥ್ಯ ನೀಡಬಹುದು ಎಂದು ಹೇಳಲಾಗುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap