ತುಮಕೂರು
ತುಮಕೂರು ನಗರದ ಹೊರವಲಯ ತುಮಕೂರು-ಮಧುಗಿರಿ ರಸ್ತೆಯ ಬಾಲಾಜಿ ಲೇಔಟ್ ಬಳಿ ಸೆ. 4 ರಂದು ಸಂಜೆ 5-30ರಲ್ಲಿ ಕೊರಟಗೆರೆ ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದು ಹೋಗುತ್ತಿದ್ದ ಆರ್.ಗೋವಿಂದರಾಜು ಎಂಬುವವರು ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುವಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯೂ ಆಗಿದೆ. ಈ ಬಗ್ಗೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 279, 337 ರ ಪ್ರಕಾರ ಮೊಕದ್ದಮೆ ದಾಖಲಾಗಿದೆ.