ನವದೆಹಲಿ
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿ ಆರಂಭಕ್ಕೆ ಇನ್ನುಳಿದಿರುವುದು ಕೇವಲ ದಿನಗಳು ಮಾತ್ರ. ನವೆಂಬರ್ 22 ರಿಂದ ಶುರುವಾಗಲಿರುವ 5 ಪಂದ್ಯಗಳ ಈ ಸರಣಿಯು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಈ ಸರಣಿಯನ್ನು ಭಾರತ ತಂಡವು 4-0 ಅಂತರದಿಂದ ನೇರವಾಗಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೇರಬಹುದು. ಆದರೆ ಆಸ್ಟ್ರೇಲಿಯಾದಲ್ಲಿ ಇಂತಹದೊಂದು ಗೆಲುವು ಅಸಾಧ್ಯ ಎಂದಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಸುನಿಲ್ ಗವಾಸ್ಕರ್.
ಖಾಸಗಿ ಚಾನೆಲ್ ಚರ್ಚೆಯಲ್ಲಿ ಮಾತನಾಡಿದ ಸುನಿಲ್ ಗವಾಸ್ಕರ್, ಭಾರತ ತಂಡವು ಆಸ್ಟ್ರೇಲಿಯಾದಲ್ಲಿ ಆಸ್ಟ್ರೇಲಿಯಾವನ್ನು 4-0 ಅಂತರದಿಂದ ಸೋಲಿಸುವುದು ಅಸಾಧ್ಯದ ಮಾತು. ಹೀಗಾಗಿ ಅಮೋಘ ಗೆಲುವಿನೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೇರುವ ಕನಸನ್ನು ನೀವು ಬದಿಗಿಡಿ.
ಬದಲಾಗಿ ಆಸ್ಟ್ರೇಲಿಯಾದಲ್ಲಿ ಸರಣಿ ಗೆಲ್ಲುವುದಕ್ಕೆ ಪ್ರಯತ್ನ ಮಾಡಿ ಎಂದು ಗವಾಸ್ಕರ್ ಹೇಳಿದ್ದಾರೆ.ಮಾತು ಮುಂದುವರೆಸಿದ ಗವಾಸ್ಕರ್, ಟೀಮ್ ಇಂಡಿಯಾ ಅಸಂಭವ ಗೆಲುವನ್ನು ತನ್ನದಾಗಿಸಿಕೊಳ್ಳುವ ಬಯಕೆಯನ್ನು ಬಿಟ್ಟು ಬಿಡುವುದು ಉತ್ತಮ. 4-0 ಅಂತರದ ಗೆಲುವಿನ ನಿರೀಕ್ಷೆ ಬಿಟ್ಟು, ಎರಡು ಅಥವಾ ಮೂರು ಪಂದ್ಯಗಳನ್ನು ಗೆದ್ದರೂ ಅದು ಗಮನಾರ್ಹ ಸಾಧನೆಯಾಗಲಿದೆ. ಈ ಮೂಲಕ ಟೀಮ್ ಇಂಡಿಯಾ ಸರಣಿ ಗೆಲುವಿನತ್ತ ಹೆಚ್ಚಿನ ಗಮನಹರಿಸಬೇಕೆಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ.