ಭಾರತ : 24ಗಂಟೆಗಳಲ್ಲಿ 6050 ಹೊಸ ಕೊರೊನಾ ಪ್ರಕರಣ ಪತ್ತೆ

ನವದೆಹಲಿ:

       ಕಳೆದ 24 ಗಂಟೆಗಳಲ್ಲಿ 6,050 ಕೊರೊನಾ ಕೇಸ್ ಪತ್ತೆಯಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 28,303ಕ್ಕೆ ಏರಿಕೆಯಾಗಿದೆ. ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಂದೇಶ ರವಾನಿಸಿದ್ದು, ಮತ್ತೊಂದು ಕಡೆ ದೇಶದಲ್ಲಿ ಒಂದೊಂದೇ ರಾಜ್ಯಗಳು ಮಾಸ್ಕ್ ಕಡ್ಡಾಯ ಮಾಡುತ್ತಿವೆ.

     ಅಷ್ಟಕ್ಕೂ ನಿನ್ನೆ ಅಂದರೆ ಗುರುವಾರ 5,335 ಕೊರೊನಾ ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿದ್ದವು, ಇಂದು ಆ ಸಂಖ್ಯೆ ಮತ್ತಷ್ಟು ಹೆಚ್ಚಾಗಿದ್ದು 6,050 ಕೇಸ್ ಕನ್ಫರ್ಮ್ ಆಗಿವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ವೇಗವಾಗಿ ಕೊರೊನಾ ಸೋಂಕು ಹರಡುವ ಭೀತಿ ಆವರಿಸಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ನೇತೃತ್ವದಲ್ಲಿ ದೇಶದ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರ ಸಭೆ ನಡೆಸಲಾಗಿದೆ.

      ರಾಜ್ಯಗಳಿಗೆ ಗಂಭೀರ ಸಂದೇಶ: ದೇಶದಲ್ಲಿ ಕೊರೊನಾ ಕಂಟ್ರೋಲ್‌ಗೆ ಬಂದೇ ಬಿಟ್ಟಿದೆ ಅಂತಾ ನಿಟ್ಟುಸಿರು ಬಿಡುವುದರ ಒಳಗೆ ಮತ್ತೊಮ್ಮೆ ಸಂಚಲನ ಸೃಷ್ಟಿಯಾಗಿದೆ. ಲಸಿಕೆ ಅಭಿಯಾನ ಯಶಸ್ವಿಯಾಗಿ ನಡೆದಿದ್ದರೂ ಕೊರೊನಾ ರೂಪಾಂತರಿಯಾಗಿ ಕಾಟ ಕೊಡುತ್ತಿದೆ. ಹೀಗಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಜ್ಯ ಸಚಿವ ಡಾ. ಭಾರತಿ ಪ್ರವೀಣ್ ಪವಾರ್ ರಾಜ್ಯಗಳಿಗೆ ಗಂಭೀರ ಸಂದೇಶವನ್ನು ರವಾನಿಸಿದ್ದಾರೆ. ತುರ್ತು ಪರಿಸ್ಥಿತಿ ಎದುರಾದರೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮ ಹಾಗೂ ಮಾರ್ಗಸೂಚಿ ಬಗ್ಗೆ ಸಭೆಯಲ್ಲಿ ರಾಜ್ಯಗಳಿಗೆ ಸಲಹೆ ನೀಡಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap