ಶಿಮ್ಲಾ:
ಭಾರಿ ಮಳೆ ಮತ್ತೆ ಮೇಘಸ್ಪೋಟ ಸಂಭವಿಸಿದೆ, ಇದರಲ್ಲಿ 7 ಮಂದಿ ಮೃತಪಟ್ಟಿದ್ದು, ಮೂವರು ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ
ಹಿಮಾಚಲ ಪ್ರದೇಶದಲ್ಲಿ ವರುಣನ ಆರ್ಭಟ ಮತ್ತೆ ಜೋರಾಗಿದೆ. ಮೇಘಸ್ಫೋಟ ಸಂಭವಿಸಿ, ಸೋಲನ್ ಜಿಲ್ಲೆಯ ಕಂದಘಾಟ್ ಉಪ ವಿಭಾಗದ ಜಾಡೋನ್ ಗ್ರಾಮಕ್ಕೆ ನೀರು ನುಗ್ಗಿದೆ.
ಕಂದಘಾಟ್ ವಿಭಾಗದ ಜಡೋನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಕೆಲವೆಡೆ ಭೂಕುಸಿತ ಸಂಭವಿಸಿದೆ. ಇನ್ನು ಪ್ರವಾಹದ ಅಬ್ಬರಕ್ಕೆ ಎರಡು ಮನೆಗಳು, ಹತ್ತಾರು ವಾಹನಗಳು ಕೊಚ್ಚಿಹೋಗಿವೆ. ಕಳೆದ 24 ಗಂಟೆಗಳಲ್ಲಿ ಹಿಮಾಚಲ ಪ್ರದೇಶದ ಬಹುತೇಕ ಭಾಗಗಳಲ್ಲಿ ಭಾರಿ ಮಳೆಯಾಗಿದ್ದು, ರಸ್ತೆಗಳು, ಕಟ್ಟಡಗಳು ಕೂಡ ಕೊಚ್ಚಿಹೋಗಿವೆ.
![](https://prajapragathi.com/wp-content/uploads/2023/08/raink.jpg)