ಭ್ರಷ್ಟಾಚಾರ ಮತ್ತು ಬೆಲೆ ಏರಿಕೆ ಕರ್ನಾಟಕದಲ್ಲಿ ಚುನಾವಣಾ ವಿಷಯವೇ ಅಲ್ಲ : ಅರುಣ್‌ ಸಿಂಗ್

ಬೆಂಗಳೂರು

     ಭ್ರಷ್ಟಾಚಾರ ಮತ್ತು ಬೆಲೆ ಏರಿಕೆ ಕರ್ನಾಟಕದಲ್ಲಿ ಚುನಾವಣಾ ವಿಷಯಗಳೇ ಅಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

     ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ ಮತ್ತು ಇತರ ರಾಜ್ಯಗಳಲ್ಲಿಯೂ ಬೆಲೆ ಏರಿಕೆ ವಿಚಾರವನ್ನು ಹಿಡಿದು ಕಾಂಗ್ರೆಸ್ ಪ್ರಚಾರ ನಡೆಸಿತ್ತು. ಆದರೆ, ಜನತೆ ಅವರನ್ನು ತಿರಸ್ಕರಿಸಿದರು. ರಾಜ್ಯದಲ್ಲಿಯೂ ಇದೇ ಪರಿಸ್ಥಿತಿ ಎದುರಾಗಲಿದೆ ಎಂದು ಹೇಳಿದರು.

    ಶೇ.40 ಕಮಿಷನ್, ಬೆಲೆ ಏರಿಕೆ ವಿಚಾರ ಹಿಡಿದು ಕಾಂಗ್ರೆಸ್ ಪ್ರಚಾರ ನಡೆಸುತ್ತಿದ್ದು, ಆ ಪಕ್ಷವನ್ನು ಜನರು ತಿರಸ್ಕರಿಸುತ್ತಾರೆಂ. ಡಬಲ್ ಎಂಜಿನ್ ಸರ್ಕಾರವನ್ನು ಬೆಂಬಲಿಸುತ್ತಾರೆ ಎಂದರು. ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ಕಾಂಗ್ರೆಸ್’ಗೆ ದಾಖಲೆ ನೀಡುವಂತೆ ಕೇಳಲಾಗಿತ್ತು. ಆದರೆ, ಆ ದಾಖಲೆಗಳನ್ನು ಒದಗಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ..

    ದಶಕಗಳಿಂದ ಬಾಕಿ ಉಳಿದಿದ್ದ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯದ ಸಮಸ್ಯೆಯನ್ನು ಬಗೆಹರಿಸುವಲ್ಲಿ ಬಿಜೆಪಿ ಯಶಸ್ವಿಯಾಗಿರುವುದರಿಂದ ಕರ್ನಾಟಕದಲ್ಲಿ ಕಾಂಗ್ರೆಸ್ ಬಲ ಮತ್ತಷ್ಟು ಕುಸಿಯಲಿದೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap