ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ ಗಿರಿ ಪ್ರಕರಣ…!

ಮಂಗಳೂರು:

      ಕರ್ನಾಟಕದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ವರದಿಯಾಗಿದ್ದು, ಸೋಮೇಶ್ವರ ಬೀಚ್​ನಲ್ಲಿ ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

     ಕರಾವಳಿ ನಗರ ಮಂಗಳೂರಿನ ಸೋಮೇಶ್ವರ ಬೀಚ್​ನಲ್ಲಿ  ನೈತಿಕ ಪೊಲೀಸ್ ಗಿರಿ  ನಡೆದಿದ್ದು, ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ. ಮೂವರು ಹಿಂದೂ ವಿದ್ಯಾರ್ಥಿನಿಯರು, ಮೂವರು ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ದಾಳಿ ನಡೆದಿದೆ. ಮೂಲಗಳ ಪ್ರಕಾರ ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದರು. ಇದೇ ವೇಳೆ ತಂಡವೊಂದು ಹಲ್ಲೆ ನಡೆಸಿದೆ ಎನ್ನಲಾಗಿದೆ.

      ಇನ್ನು ರಾಜ್ಯದಲ್ಲಿ ಇನ್ಮುಂದೆ ನೈತಿಕ ಪೊಲೀಸ್​ಗಿರಿಗೆ ಅವಕಾಶ ಇಲ್ಲ, ಹೀಗೆ ಮಾಡುವವರ‌ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಇತ್ತೀಚೆಗೆ ಪೊಲೀಸ್​ ಇಲಾಖೆಗೆ ಖಡಕ್ ಸೂಚನೆ ನೀಡಿದ್ದರು. ಬಳಿಕ ಅಧಿಕಾರಿಗಳು ಕೂಡ ನೈತಿಕ ಪೊಲೀಸ್​ ಗಿರಿ ನಡೆಸುವವರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದರು. ಇದರ ಬೆನ್ನಲ್ಲೇ ನೈತಿಕ ಪೊಲೀಸ್ ಗಿರಿಯ 3ನೇ ಘಟನೆ ವರದಿಯಾಗಿದೆ.

      ಈ ಹಿಂದೆ ಚಿಕ್ಕಬಳ್ಳಾಪುರ ನಗರದ ಗೋಪಿಕಾ ಚಾಟ್ಸ್ ಬಳಿ ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಹೋಟೆಲ್​ಗೆ ಹೋಗಿದಕ್ಕೆ ಮುಸ್ಲಿಂ ಯುವಕರ ಗುಂಪು ನೈತಿಕ ಪೊಲೀಸ್ ಗಿರಿ ನಡೆಸಿತ್ತು. ಆ ನಂತರ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಕೂಡ ನೈತಿಕ ಪೊಲೀಸ್ ಗಿರಿ ನಡೆದಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap