ಮಣಿಪುರ
1973ರ CRPC ಅಡಿಯಲ್ಲಿ ಈ ಆದೇಶ ಹೊರಡಿಸಲಾಗಿದ್ದು, ಆದೇಶಕ್ಕೆ ರಾಜ್ಯಪಾಲರು ಸಹಿ ಮಾಡಿದ್ದಾರೆ. ಎಲ್ಲಾ ರೀತಿಯ ಮನವೊಲಿಕೆ ಹಾಗೂ ಎಚ್ಚರಿಕೆ ನಡುವೆಯೂ ಬಗ್ಗದೇ ಹೋದರೆ, ಪರಿಸ್ಥಿತಿ ಕೈಮೀರಿದರೆ ಕಂಡಲ್ಲಿ ಗುಂಡು ಹಾರಿಸುವಂತೆ ಮಣಿಪುರ ಗೃಹ ಇಲಾಖೆ ಸೂಚನೆ ನೀಡಿದೆ. ಆದೇಶಗಳನ್ನು ಹೊರಡಿಸಲು ರಾಜ್ಯದ ಮಾಜಿಸ್ಟ್ರೇಟರ್‌ಗಳಿಗೆ ಅಧಿಕಾರ ನೀಡಲಾಗಿದೆ. ಗಲಭೆ ನಿಯಂತ್ರಣಕ್ಕೆ ರ್ಯಾಪಿಡ್ ಆಕ್ಷನ್ ಫೋರ್ಸ್ ನ 500 ಸಿಬ್ಬಂದಿಯನ್ನು ಇಂಫಾಲ್ ಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.
ಹಿಂಸಾಚಾರದಿಂದ ಈ ವರೆಗೂ 10 ಮಂದಿ ಸಾವನ್ನಪ್ಪಿದ್ದು, ಹಿಂಸಾಚಾರ ಪೀಡಿತ ಪ್ರದೇಶಗಳಿಂದ ಈ ವರೆಗೂ ಸುಮಾರು 9,000 ಜನರನ್ನು ಸ್ಥಳಾಂತರಿಸಲಾಗಿದೆ.
ಇಲ್ಲಿಯವರೆಗೆ, 9,000 ಜನರನ್ನು ಹಿಂಸಾಚಾರ ಪೀಡಿತ ಪ್ರದೇಶಗಳಿಂದ ಭದ್ರತಾ ಪಡೆಗಳು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿದೆ.
ಚುರಾಚಂದ್‌ಪುರದಲ್ಲಿ ಸುಮಾರು 5,000 ಜನರು, ಇಂಫಾಲ್ ಕಣಿವೆಯಲ್ಲಿ 2,000 ಜನರನ್ನು ಮತ್ತು ತೆನುಗೋಪಾಲ್ ಜಿಲ್ಲೆಯ ಗಡಿ ಪಟ್ಟಣವಾದ ಮೊರೆಹ್‌ನಲ್ಲಿ 2,000 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ರಕ್ಷಣಾ ವಕ್ತಾರರು ಮಾಹಿತಿ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
