ಮತದಾರರ ಅನುಕೂಲಕ್ಕಾಗಿ ಚುನಾವಣಾ ಆಪ್ ಬಿಡುಗಡೆ…!!

ಬೆಂಗಳೂರು

        ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತದಾರರಿಗೆ ನೆರವು `ಚುನಾವಣಾ ಆ್ಯಪ್’ನ್ನು ಸಿದ್ಧಪಡಿಸಲಾಗಿದ್ದು ಇದರಿಂದ ಮತದಾರರು ತಮ್ಮ ಹೆಸರು, ಮತಗಟ್ಟೆಯ ವಿಳಾಸ, ತಲುಪುವ ಮಾರ್ಗ ಮತ್ತಿತರ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ.

       ಚುನಾವಣಾ ಆ್ಯಪ್’ನ್ನು ಆಂಡ್ರಾಯ್ಡ್ ಮತ್ತು ಐಓಎಸ್ ವರ್ಷನ್ ಮೊಬೈಲ್‍ಗಳಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದು. ಇದರ ಮೂಲಕ ಮತದಾರರ ಪಟ್ಟಿಯಲ್ಲಿ ಕುಟುಂಬದ ಸದಸ್ಯರು ಮತ್ತು ಅಕ್ಕಪಕ್ಕದವರ ಮತ ನೋಂದಾವಣಿ ವಿವರಗಳ ಮಾಹಿತಿಯನ್ನು ನೋಡಬಹುದಾಗಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಯೂ ಆದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

        ಸಿ ವಿಜಿವ್ ಆಪ್ ಮೂಲಕ ಎಂಪಿಸಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನು ಪತ್ತೆ ಹಚ್ಚಬಹುದಾಗಿದೆ. ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿರುವ ತಪ್ಪುಗಳು, ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಕುರಿತಂತೆ ವೀಡಿಯೋ ಮೂಲಕ ಚುನಾವಣಾ ವೀಕ್ಷಕರ ಗಮನಕ್ಕೆ ತರಬಹುದಾಗಿದೆ. ಇದನ್ನು ಗೌಪ್ಯವಾಗಿಡಲಾಗುವುದು ಎಂದರು.

        ಬಿಬಿಎಂಪಿಯ ಅಲೆಕ್ಸ್ 3ನೇ ಕಟ್ಟಡದ 6ನೇ ಮಹಡಿಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಸಂಪರ್ಕ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಚುನಾವಣೆ ಅಧಿಸೂಚನೆ ಬಳಿಕ ಈ ಕೇಂದ್ರವು ದಿನದ 24 ಗಂಟೆ ಕೆಲಸ ಮಾಡಲಿದೆ ಎಂದು ತಿಳಿಸಿದರು.

        ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಪ್ರಶ್ನೆಗಳಿಗೆ 1950 ಉಚಿತ ಸಹಾಯವಾಣಿ ಮೂಲಕ ಮಾಹಿತಿ ಪಡೆಯಬಹುದಾಗಿದೆ ಲೋಕಸಭಾ ಚುನಾವಣೆಗೆ ಮುನ್ನ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಇವಿಎಂ – ವಿವಿ ಪ್ಯಾಕ್‍ಗಳ ಬಗ್ಗೆ ಅಲ್ಲಲ್ಲಿ ಪ್ರದರ್ಶನ ನೀಡಲಾಗುವುದು. ಮತದಾರರ ಚೀಟಿ ಮತ್ತು ಮಾರ್ಗದರ್ಶಿ ಪತ್ರಿಕೆಗಳನ್ನು ವಿತರಿಸಲಾಗುವುದು ಎಂದು ಅವರು ತಿಳಿಸಿದರು.

         ಮತದಾರರು ತಮ್ಮ ಹೆಸರಿನ ಮತದಾರರ ಚೀಟಿಯನ್ನು ಇನ್ನೊಬ್ಬರಿಗೆ ವರ್ಗಾಯಿಸುವಂತಿಲ್ಲ. ಒಂದು ವೇಳೆ ಮತದಾರರು ಇನ್ನೊಬ್ಬರಿಗೆ ನೀಡುವುದು ಹಾಗೂ ಮತದಾರರಿಂದ ಇನ್ನೊಬ್ಬರ ಮತದಾರರ ಚೀಟಿಯನ್ನು ಪಡೆಯುವುದು ಅಪರಾಧವಾಗಿದ್ದು ಇದು ದಂಡನೆಗೆ ಅರ್ಹರಾಗಿರುತ್ತಾರೆ ಎಂದರು ಪತ್ರಿಕಾಗೋಷ್ಠಿಯಲ್ಲಿ ವಿಶೇಷ ಆಯುಕ್ತ ರಣದೀಪ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಅರ್ಹ ಮತದಾರರ ಪಟ್ಟಿ

        ಲೋಕಸಭಾ ಚುನಾವಣೆ ಸುಸೂತ್ರವಾಗಿ ನಡೆಯಲು 8514 ಮತಗಟ್ಟೆಗಳನ್ನು ನಿರ್ಮಿಸಲಾಗಿದೆ. ಈವರೆಗೆ 3,97,211 ಪುರುಷ ಮತದಾರರು, 34,35,097 ಮಹಿಳಾ ಮತದಾರರು ಹಾಗೂ 703 ಇತರೆ ಮತದಾರರೂ ಸೇರಿದಂತೆ ಒಟ್ಟು 71,15,061 ಮತದಾರರು ಮತದಾನ ಮಾಡಲು ಅರ್ಹರಾಗಿದ್ದಾರೆ.ಜಿಲ್ಲಾ ಚುನಾವಣಾಧಿಕಾರಿಗಳ ಅಧೀನದಲ್ಲಿ ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಕ್ಷೇತ್ರಗಳು ಬರಲಿದೆ

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap