ಹಾವೇರಿ :
ತಾಲೂಕ ಪಂಚಾಯತಿ ಮತ್ತು ಆರೋಗ್ಯ ಇಲಾಖೆಯ ವತಿಯಿಂದ ತಾಲೂಕ ಮಟ್ಟದ ಆಶಾಕಾರ್ಯಕರ್ತರು ಕಾರ್ಯಾಗಾರ ಇತ್ತೀಚೆಗೆ ಆರೋಗ್ಯ ಭವನದಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಉದ್ದೆಶಿಸಿ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಯಾದ ಶ್ರೀಮತಿ ಅನ್ನಪೂರ್ಣ ಮುದುಕಮ್ಮನವರ ಮಾತನಾಡಿ ಮತದಾನ ಎನ್ನುವುದು ನಮ್ಮೆಲ್ಲರ ಹಕ್ಕಾಗಿದೆ.
ನಮ್ಮ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಿ ಪ್ರಜಾಪ್ರಭುತ್ವದ ಯಶಸ್ವಿಗೆ ಶ್ರಮಿಸಬೇಕಾಗಿದೆ. ಆಶಾಕಾರ್ಯಕರ್ತರು ಗ್ರಾಮ ಮಟ್ಟದಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಗ್ರಾಮಗಳಲ್ಲಿ ಕಡ್ಡಾಯವಾಗಿ ಅರ್ಹ ಮತದಾರರು ಚುನಾವಣೆಯ ದಿನ ಮತ ಚಲಾಯಿಸಿ ತಮ್ಮ ಕರ್ತವ್ಯವನ್ನು ಮಾಡುವಂತೆ ಪ್ರೇರೆಪಿಸಬೇಕು. ಇದೆ ಸಂದರ್ಭದಲ್ಲಿ ಮತದಾರರಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿ ಪ್ಯಾಟ ಪ್ರಾತ್ಯಕ್ಷಿಕೆಯನ್ನು ನೆಡಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಶ್ರೀಮತಿ ಪುಷ್ಪಲತಾ ಬಿದರಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕ ಆರೋಗ್ಯ ಅಧಿಕಾರಿಗಳಾz ಪಿ ಎಸ್ ಕುಂದೂರ, ಸೆಕ್ಟರ ಅಧಿಕಾರಿಳಾದ ಸಿ ಎಸ್ ಭಗವಂತಗೌಡ್ರ, ಚಂದ್ರಕಾಂತ ಹಾಗೂ ಕಾರ್ಯಕರ್ತೆಯರು, ಭಾಗವಹಿಸಿದ್ದರು.