ಬೆಂಗಳೂರು
ಕಾಂಗ್ರೆಸ್ ಪಕ್ಷದ ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಪಾನ ಪ್ರಿಯರಿಗೆ ಬರೆ ಎಳೆದಿದ್ದಾರೆ.
ಹಿಂದೆಂದೂ ಇಲ್ಲದಷ್ಟು ಪ್ರಮಾಣದಲ್ಲಿ ಅಂದರೆ ಅಬಕಾರಿ ತೆರಿಗೆಯನ್ನು ಶೆ. 20 ರಷ್ಟು ಹೆಚ್ಚಳ ಮಾಡುವ ಮೂಲಕ ಮದ್ಯಪ್ರಿಯರ ಜೇಬಿಗೆ ಕತ್ತರಿ ಹಾಕಿದ್ದಾರೆ. ಮದ್ಯ ಪ್ರಿಯರಿಗೆ ಶುಕ್ರವಾರ ಕರಾಳ ಶುಕ್ರವಾಗಿ ಮಾರ್ಪಟ್ಟಿದೆ. ಬಿಟ್ಟಿ ಭಾಗ್ಯಗಳನ್ನು ಜಾರಿ ಮಾಡಲು ಮದ್ಯದ ಮೇಲೆ ಹೆಚ್ಚಿನ ತೆರಿಗೆ ವಿಧಿಸಿರುವುದು ಎಷ್ಟರ ಮಟ್ಟಿಗೆ ಸರಿ ಎಂಬ ಕೂಗೆದ್ದಿದೆ.
2023-24ನೇ ಸಾಲಿನ ಮುಂಗಡ ಪತ್ರದಲ್ಲಿ ಈ ವಿಷಯ ಪ್ರಕಟಿಸಿದ್ದು, ಮಧ್ಯ ಇನ್ನಷ್ಟು ದುಬಾರಿಯಾಗಲಿದ್ದು ಮದ್ಯಪ್ರಿಯರಿಗೆ ಹೆಚ್ಚಿನ ಹೊರೆ ಬೀಳಲಿದೆ. ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮೊದಲನೇ ಹಾಗೂ ಇದುವರೆಗೆ ಒಟ್ಟಾರೆ 14ನೇ ಮುಂಗಡ ಪತ್ರವನ್ನು ವಿಧಾನಸಭೆಯಲ್ಲಿ ಮಂಡಿಸಿ, ಅಬಕಾರಿ ತೆರಿಗೆಯನ್ನು ಶೇ. 20 ರಷ್ಟು ಹೆಚ್ಚಿಸಿರುವುದನ್ನು ಅವರು ಘೋಷಿಸಿದ್ದಾರೆ.
ಬಿಯರ್ ಮೇಲೆ ಶೇ. 10ರಷ್ಟು ತೆರಿಗೆ ಹೆಚ್ಚಳ ಮಾಡಲಾಗಿದೆ. ಅಲ್ಲದೆ ಇನ್ನಿತರೆ ಮದ್ಯಗಳ ಮೇಲೆ ತೆರಿಗೆಯನ್ನು ವಿಧಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಸಂಪನ್ಮೂಲ ಕ್ರೂಢೀಕರಣ ಆದ್ಯತೆ ನೀಡಿದ್ದಾರೆ.ಕಾಂಗ್ರೆಸ್ ಪಕ್ಷ ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಹಿನ್ನೆಲೆಯಲ್ಲಿ ಮದ್ಯ ಸೇರಿದಂತೆ ಇನ್ನಿತರೆ ತೆರಿಗೆಯನ್ನು ಹೆಚ್ಚಳ ಮಾಡಿ ಬಜೆಟ್ ನಲ್ಲಿ ಅವರು ಪ್ರಕಟಿಸಿದ್ದಾರೆ.
ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ. 175 ರಿಂದ 185ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಅಬಕಾರಿ ಸುಂಕದ ದರ ಹೆಚ್ಚಳದ ನಂತರವೂ ರಾಜ್ಯದಲ್ಲಿ ಮದ್ಯದ ದರ ಇತರೆ ರಾಜ್ಯಗಳಿಗಿಂತ ಕಡಿಮೆ ಇದೆ ಎಂದಿದ್ದಾರೆ.
2023-24ರಲ್ಲಿ ಅಬಕಾರಿ ಇಲಾಖೆಗೆ 36 ಸಾವಿರ ಕೋಟಿ ರಾಜಸ್ವ ಸಂಗ್ರಹ ಮಾಡುವ ಗುರಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ