ವಿಜಯಪುರ
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಣಕಿಳಿಸಲು ಉದ್ದೇಶಿಸಲಾಗಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಎರಡೂ ಪಕ್ಷದ ಮುಖಂಡರ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಮಧು ಬಂಗಾರಪ್ಪ ಅವರನ್ನು ಅಭ್ಯರ್ಥಿಯಾಗಿ ಮಾಡುವಂತೆ ಕಾಂಗ್ರೆಸ್ ನಾಯಕರನ್ನು ಕೋರಲಾಗಿದೆ. ಸದ್ಯ ಮಧು ಬಂಗಾರಪ್ಪ ವಿದೇಶ ಪ್ರವಾಸದಲ್ಲಿ ಇದ್ದು, ಅವರು ಬಂದ ನಂತರ ಚರ್ಚೆ ನಡೆಸಲಾಗುವುದು. ಒಂದು ವೇಳೆ ಅವರು ಸ್ಪರ್ಧೆಗೆ ಹಿಂದೇಟು ಹಾಕಿದರೆ ಕಾಂಗ್ರೆಸ್ಗೆ ಈ ಕ್ಷೇತ್ರವನ್ನು ಬಿಟ್ಟು ಕೊಡಲಾಗುವುದು ಎಂದರು.
ಇನ್ನು ಮಂಡ್ಯ ಮತ್ತು ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳ ಘೊಷಣೆ ಮಾಡುತ್ತೇವೆ. ಮಂಡ್ಯದಲ್ಲಿ ನಮ್ಮ ಮೊಮ್ಮಕ್ಕಳು ಯಾರೂ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಸ್ಥಳೀಯ ವ್ಯಕ್ತಿಗಳಿಗೆ ಅವಕಾಶ ಮಾಡಿಕೊಡಲಾಗುವುದು. ಹಿಂದಿನ ಸರ್ಕಾರದ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಎರಡೂ ಪಕ್ಷಗಳಲ್ಲಿಯೂ ಒಗ್ಗಟ್ಟಿದೆ. ಸರ್ಕಾರ ಉತ್ತಮ ಆಡಳಿತ ನಡೆಸಲಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








