ಮರ ಬಿದ್ದು ಮೃತಪಟ್ಟ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಚೆಕ್ ವಿತರಣೆ 

ಬೆಂಗಳೂರು : ನಗರದ ಪೂರ್ವ ವಲಯ ವ್ಯಾಪ್ತಿಯಲ್ಲಿ  13 ವರ್ಷದ ರಾಕೇಶ್ ಎಂಬ ಹುಡುಗನ ತಲೆಯ ಮೇಲೆ ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಹುಡುಗನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿತ್ತು.
ಬಿಬಿಎಂಪಿಯ ಪೂರ್ವ ವಲಯ ವ್ಯಾಪ್ತಿಯಲ್ಲಿ ನಡೆದ “ಮುಖ್ಯ ಆಯುಕ್ತರ ನಡೆ ವಲಯದ ಕಡೆ” ಕಾರ್ಯಕ್ರಮದಲ್ಲಿ ಮರದ ಕೊಂಬೆಯಿಂದ ಮೃತಪಟ್ಟಿರುವ ಘಟನೆ ತಿಳಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರು ಕೂಡಲೆ ಪರಿಹಾರ ನೀಡಲು ವಲಯ ಆಯುಕ್ತರಿಗೆ ಸೂಚನೆ ನೀಡಿದ್ದರು. ಅದರಂತೆ  ಪಾಲಿಕೆ ಕೇಂದ್ರ ಕಛೇರಿಯಲ್ಲಿ ಪೂರ್ವ ವಲಯ ಆಯುಕ್ತರು ಹಾಗೂ ಯೋಜನಾ ವಿಭಾಗದ ವಿಶೇಷ ಆಯುಕ್ತ ಪಿ.ಎನ್.ರವೀಂದ್ರ ಮೃತರಾದ ರಾಕೇಶ್ ತಂದೆ ಸರವಣ್ಣ, ತಾಯಿ ಯಮುನಾ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರದ ಚೆಕ್ ನೀಡಿದರು.

Recent Articles

spot_img

Related Stories

Share via
Copy link