ಬೆಂಗಳೂರು:
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಮಹದಾಯಿ ನ್ಯಾಯಾಧಿಕರಣದ ನೀರು ಹಂಚಿಕೆ ತೀರ್ಪಿನ ಕುರಿತು ಮುಂದೆ ಕೈಗೊಳ್ಳಬೇಕಾದ ಕ್ರಮದ ಕುರಿತು ಕಾನೂನು ಮತ್ತು ನೀರಾವರಿ ತಜ್ಞರೊಂದಿಗೆ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಆ ಭಾಗದ ಜನರ ಹಿತದೃಷ್ಟಿಯಿಂದ ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳನ್ನು ಎಲ್ಲ ಆಯಾಮಗಳಿಂದ ಪರಿಶೀಲಿಸಿ, ಚರ್ಚಿಸಿ ಸಲಹೆ ನೀಡುವಂತೆ ತಿಳಿಸಿದರು.
ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಬೈರೇಗೌಡ, ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಜಲ ಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ಅಡ್ವೊಕೇಟ್ ಜನರಲ್ ಉದಯ ಹೊಳ್ಳ, ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್, ನೀರಾವರಿ ತಜ್ಞರು, ಹಿರಿಯ ವಕೀಲರು, ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.