ತಿಪಟೂರು
ತಾಲ್ಲೂಕಿನ ಆದಿಚುಂಚನಗಿರಿ ಶಾಖಾಮಠ ದಸರಿಘಟ್ಟ ಕ್ಷೇತ್ರದ ಶ್ರೀ ಚೌಡೇಶ್ವರಿ ದೇವಿಯ ದೇವಾಲಯದಲ್ಲಿ ಮಹಾಲಯ ಅಮಾವಾಸ್ಯೆಯ ಪ್ರಯುಕ್ತ ದೇವಿಯವರ ಸನ್ನಿಧಾನದಲ್ಲಿ ಶ್ರೀ ಕ್ಷೇತ್ರದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿಯವರ ನೇತೃತ್ವದಲ್ಲಿ ದುರ್ಗಾಹೋಮವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಂಗಳೂರಿನ ಶ್ರೀ ಆದಿಚುಂಚನಗಿರಿ ಶಾಖಾಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಉಪಸ್ಥಿತರಿದ್ದರು.
ಬೆಳಗಿನಿಂದಲೇ ದೇವಿಯವರಿಗೆ ಅಭಿಷೇಕ, ಮಹಾಮಂಗಳಾರತಿ, ದೇವಿಪಾರಾಯಣದ ನಂತರದಲ್ಲಿ ಶ್ರೀ ಚೌಡೇಶ್ವರಿ ಕಲಾ ತಂಡದಿಂದ ಭಜನಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ನೂರಾರು ಭಕ್ತಾದಿಗಳು ಭಾಗವಹಿಸಿ ದೇವಿಯ ದರ್ಶನ ಪಡೆದು ಕೃತಾರ್ಥರಾದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ