ಮಾದಕ ವಸ್ತು ಮಾರಾಟ : ವಿದೇಶಿ ಪ್ರಜೆ ಬಂಧನ.!

ಬೆಂಗಳೂರು

   ಮಾದಕ ವಸ್ತು ಕೋಕೇನ್ ಮಾರಾಟದಲ್ಲಿ ತೊಡಗಿದ್ದ ನೈಜೀರಿಯನ್‍ನೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು 20 ಗ್ರಾಂ ಕೋಕೇನ್‍ನನ್ನು ವಶಪಡಿಸಿಕೊಂಡಿದ್ದಾರೆ.ನೈಜೀರಿಯ ಮೂಲದ ಕಲ್ಕೆರೆ ಬಂಜಾರ ಲೇಔಟ್‍ನ ಚಿಬುಕೋ ಜಾನ್ ಬಾಸ್ಕೋ(39) ಬಂಧಿತ ಆರೋಪಿಯಾಗಿದ್ದಾನೆ,ಬಂಧಿತನಿಂದ ಮಾದಕ ವಸ್ತು 20 ಗ್ರಾಂ ಕೋಕೇನ್, ಒಂದು ಮೊಬೈಲ್ 5 ಸಾವಿರ ನಗದು ಸೇರಿ 1ಲಕ್ಷ 75 ಸಾವಿರ ಮೌಲ್ಯದ ಮಾಲುಗಳನ್ನು ವಶಪಡಿಸಿಕೊಳ್ಳಲಾಗಿದೆ ಗಳೆಂದು ಅಂದಾಜಿಸಲಾಗಿದೆ

   ಆರೋಪಿಯು ನೈಜೀರಿಯಾದಿಂದ ಭಾರತಕ್ಕೆ ಬಂದು, ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿಕೊಂಡು, ವೀಸಾ ನಿಯಮಗಳನ್ನು ಉಲ್ಲಂಘನೆ ಮಾಡಿ,ನಗರದ ವಿವಿಧ ಸ್ಥಳಗಳಲ್ಲಿ ಪರಿಚಯಸ್ಥ ಗ್ರಾಹಕರಿಗೆ ಮಾದಕ ವಸ್ತು ಮಾರಾಟ ಮಾಡುತ್ತಾ ಹಣ ಸಂಪಾದನೆ ಮಾಡುತ್ತಾ, ಗ್ರಾಹಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತಾ ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡುತ್ತಿರುವುದು ವಿಚಾರಣೆಯಿಂದ ತಿಳಿದು ಬಂದಿರುತ್ತದೆ.

    ಈತನಿಗೆ ಮಾದಕ ವಸ್ತು ಸರಬರಾಜು ಮಾಡುತ್ತಿದ್ದ ಆಸಾಮಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಈ ಸಂಬಂಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರೆದಿದೆ.ಕಲ್ಕೆರೆಯ ಬಂಜಾರ ಲೇಔಟ್‍ನಲ್ಲಿರುವ ಬಾಡಿಗೆ ಮನೆಯಲ್ಲಿ ಆರೋಪಿಯು ಮಾದಕವಸ್ತು ಇಟ್ಟುಕೊಂಡಿರುವ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಬಂಧಿಸ;ಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link