ರಾಯಪುರ : 
ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಮಾವೋ ಬಂಡುಕೋರರು ಅಡಗಿಸಿಟ್ಟಿದ್ದ ಐಇಡಿ ಸ್ಫೋಟಗೊಂಡ ಪರಿಣಾಮ ಅಪರಿಚಿತ ಮಹಿಳೆ ಸಹಿತ ಇಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ನಗರ ಹೊರವಲಯದಲ್ಲಿ ನಡೆದ ಈ ಘಟನೆಯಲ್ಲಿ ಒಬ್ಬ ಮಹಿಳೆ ಮತ್ತು ಒಬ್ಬ ಪುರುಷ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಲ್ಲಿನ ಎಸ್ಪಿ ಅಭಿಷೇಕ್ ಮೀಣ ತಿಳಿಸಿದ್ದಾರೆ.
ಭದ್ರತಾ ಪಡೆಗಳನ್ನು ಗುರಿಯಾಗಿ ಇರಿಸಿ ಈ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ ಇಂತಹ ಐಇಡಿಗಳನ್ನು ಮಾವೋ ಬಂಡುಕೋರರು ಬಳಸುವುದು ಸಾಮಾನ್ಯವಾಗಿದೆ ಮತ್ತು ಮಾವೋವಾದಿ ಈ ಬಗೆಯ ಕೃತ್ಯಗಳಿಗೆ ಈಗಾಗಲೆ ಹಲವಾರು ಪೊಲೀಸರು ಮತ್ತು ಜನಸಾಮಾನ್ಯರು ಬಲಿಯಾಗಿದ್ದಾರೆ ಎಂದು ಪೊಲೀಸರು ವರದಿಯಲ್ಲಿ ತಿಳಿಸಿದ್ದಾರೆ .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ







