ಬೆಂಗಳೂರು:
ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿ ಯಾರೆಂದು ಪ್ರಕಟಿಸಲು ಸಾಧ್ಯವಾಗಿಲ್ಲ. ಅದಕ್ಕಾಗಿ ಅವರು ಬಿಜೆಪಿ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆಕ್ಷೇಪಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮ ಪ್ರತಿನಿಧಿ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನವರು ಯಾರನ್ನಾದರೂ ಸಿಎಂ ಮಾಡಲಿ. ಅದು ಅವರ ಆಂತರಿಕ ವಿಚಾರ. ಜನರು ಅವರಿಗೆ ಬಹುಮತ ಕೊಟ್ಟಿದ್ದಾರೆ. ನಾವು ಅದನ್ನು ಸ್ವೀಕಾರ ಮಾಡಿ ವಿರೋಧ ಪಕ್ಷವಾಗಿ ರಚನಾತ್ಮಕ ಕೆಲಸ ಮಾಡಲಿದ್ದೇವೆ ಎಂದರು.
ಮುAದಿನ ವಾರ ವಿಪಕ್ಷ ನಾಯಕರ ಆಯ್ಕೆ ನಡೆಯಲಿದೆ. ಒಂದು ವಾರ ಶಾಸಕರು ತಮ್ಮ ಕ್ಷೇತ್ರದಲ್ಲಿದ್ದು, ಜನರಿಗೆ, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ ಎಂದ ಅವರು, ಕಾಂಗ್ರೆಸ್ ಸಿಎಂ ಆಯ್ಕೆ ವಿಷಯದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದರು.
ಜನತೆ ವಿದ್ಯುತ್ ಬಿಲ್ ಕಟ್ಟಬಾರದು. ವಿದ್ಯುತ್ ಬಿಲ್ ಕಟ್ಟುವುದಿಲ್ಲ ಎಂದು ಜನರು ಗಲಾಟೆ ಮಾಡುವುದು ಸಹಜ. ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ನಾಯಕರು ತಮ್ಮ ಸರಕಾರ ಬಂದ ಬಳಿಕ ವಿದ್ಯುತ್ ಬಿಲ್ ಕಟ್ಟದಿರಲು ಹೇಳಿದ್ದರು ಎಂದು ಅವರು ಪ್ರಶ್ನೆಗೆ ಉತ್ತರಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








