ದಾವಣಗೆರೆ
ಮುಖ್ಯೋಪಾಧ್ಯಾಯರೊಬ್ಬರು ಖಾಸಗಿ ಅನುದಾನಿತ ಪ್ರಾಥಮಿಕ ಶಾಲೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಪನಹಳ್ಳಿ ತಾಲೂಕಿನ ಕಮ್ಮತ್ತಹಳ್ಳಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.
ಕಮ್ಮತ್ತಹಳ್ಳಿ ಗ್ರಾಮದ ಶ್ರೀರೇಣುಕಾ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಜಿ.ಮಲ್ಲೇಶಪ್ಪ(56 ವರ್ಷ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದು, ನಾಲ್ಕು ಪುಟಗಳ ಮರಣಪತ್ರ ಬರೆದಿಟ್ಟು ಶಾಲೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಮರಣಪತ್ರವನ್ನು ವಶಕ್ಕೆ ಪಡೆದಿದ್ದಾರೆ.

ಕಮ್ಮತ್ತಹಳ್ಳಿಯ ಖಾಸಗಿ ಅನುದಾನಿತ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿದ್ದ ಮಲ್ಲೇಶಪ್ಪ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಶಾಲೆಯ ಸಿಬ್ಬಂದಿ ಬಂದು ನೋಡಿದ ನಂತರವಷ್ಟೇ ಮಲ್ಲೇಶಪ್ಪ ನೇಣು ಹಾಕಿಕೊಂಡು ಸಾವಿಗೆ ಶರಣಾದ ವಿಷಯ ಗೊತ್ತಾಗಿದೆ. ತಕ್ಷಣವೇ ಗ್ರಾಮಸ್ಥರು, ಪಾಲಕರು, ಮಕ್ಕಳು ಘಟನಾ ಸ್ಥಳ ವೀಕ್ಷಿಸಿದರು.
ಈ ಕುರಿತು ಅರಸೀಕೆರೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








