ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ…!

ಬೆಂಗಳೂರು:

     ಚಿತ್ರದುರ್ಗದ ಮುರುಘರಾಜೇಂದ್ರ ಮಠ ಮತ್ತು ಅದರ ಶಿಕ್ಷಣ ಸಂಸ್ಥೆಗಳ ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ನೇಮಕ ಮಾಡಿ ಕರ್ನಾಟಕ ಹೈಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ.

    ಈ ಕುರಿತಾದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ನೇತೃತ್ವದ ವಿಭಾಗೀಯ ಪೀಠವು, ಚಿತ್ರದುರ್ಗ ಜಿಲ್ಲಾ ಪ್ರಧಾನ ನ್ಯಾಯಾಧೀಶರು ಮಂಗಳವಾರ ಬೆಳಗ್ಗೆ 11 ಗಂಟೆಗೆ ಮಠದ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಬೇಕು ಎಂದು ಸೂಚಿಸಿದೆ

     ನಿವೃತ್ತ ಐಎಎಸ್ ಅಧಿಕಾರಿ ಪಿಎಸ್ ವಸ್ತ್ರದ್ ಅವರನ್ನು ಮಠದ ಆಡಳಿತಾಧಿಕಾರಿಯಾಗಿ ನೇಮಿಸಿದ್ದನ್ನು 2023ರ ಮೇ 22 ರಂದು ಏಕ ಸದಸ್ಯ ಪೀಠ ರದ್ದುಗೊಳಿಸಿತ್ತು. ಆದಾಗ್ಯೂ, ಮಠದ ಆಡಳಿತ ಮತ್ತು ವ್ಯವಹಾರಗಳ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳುವವರೆಗೆ ನಾಲ್ಕು ವಾರಗಳ ಕಾಲ ಆಡಳಿತಾಧಿಕಾರಿಯನ್ನು ಮುಂದುವರಿಸಲು ನ್ಯಾಯಾಲಯ ಅನುಮತಿ ನೀಡಿದೆ. ಈ ಸಮಯ ಭಾನುವಾರ ಕೊನೆಗೊಂಡಿತು.

ಮೇಲ್ಮನವಿಯ ವಿಚಾರಣೆ ನಡೆದು ಈ ನ್ಯಾಯಾಲಯದಿಂದ ಆದೇಶ ಹೊರಡಿಸುವವರೆಗೆ ಚಿತ್ರದುರ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಜಗದ್ಗುರು ಮುರುಘರಾಜೇಂದ್ರ ವಿದ್ಯಾಪೀಠ ಮತ್ತು ಮಠದ ಆಡಳಿತವನ್ನು ವಹಿಸಿಕೊಳ್ಳುವಂತೆ ನಾವು ಸೂಚಿಸುತ್ತೇವೆ.

    ಆದರೆ, ಜಿಲ್ಲಾ ನ್ಯಾಯಾಧೀಶರು ಯಾವುದೇ ಪ್ರಮುಖ ನೀತಿ ನಿರ್ಧಾರ ಕೈಗೊಳ್ಳಬಾರದು. ಮಠ ಮತ್ತು ವಿದ್ಯಾಪೀಠದ ದೈನಂದಿನ ವ್ಯವಹಾರಗಳನ್ನು ಮಾತ್ರವೇ ನಿಭಾಯಿಸಬೇಕು ಎಂದಿದೆ. 

    ಈ ಸಂಬಂಧ ನ್ಯಾಯಾಧೀಶರಿಗೆ ಯಾವುದಾದರೂ ಅಗತ್ಯ ನೆರವು ಬೇಕಾದಲ್ಲಿ ಚಿತ್ರದುರ್ಗ ಜಿಲ್ಲಾಧಿಕಾರಿಯನ್ನು ಲಿಖಿತವಾಗಿ ಕೋರಬಹುದು. ಇದರನ್ವಯ ಜಿಲ್ಲಾಧಿಕಾರಿ ತಕ್ಷಣವೇ ಅಗತ್ಯ ನೆರವು ಕಲ್ಪಿಸಬೇಕು ಎಂದು ಪೀಠ ಹೇಳಿದೆ.

    2022ರ ಸೆಪ್ಟೆಂಬರ್ 1 ರಂದು ಮುರುಘಾ ಮಠದ ಮಠಾಧೀಶರಾಗಿದ್ದ ಶಿವಮೂರ್ತಿ ಶರಣರನ್ನು ಪೊಕ್ಸೊ ಕಾಯ್ದೆಯಡಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ ನಂತರ ರಾಜ್ಯ ಸರ್ಕಾರ ಡಿಸೆಂಬರ್ 13, 2022 ರಂದು ಐಎಎಸ್ ಅಧಿಕಾರಿಯನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap