ಮುರುಘಾ ಶರಣರಿಗೆ ತಾತ್ಕಾಲಿಕ ರಿಲೀಫ್‌…!

ಬೆಂಗಳೂರು:

     ಪೋಕ್ಸೊ ಪ್ರಕರಣ ಮತ್ತು ಆ ಆರೋಪಕ್ಕೆ ಪೂರಕವಾಗಿ ವಿವಿಧ ಗುರುತರ ಅಪರಾಧಗಳ ಅಡಿ ಜೈಲಿನಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧ ಚಿತ್ರದುರ್ಗದ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣಗಳ ಸಾಕ್ಷಿ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ಶುಕ್ರವಾರ ತಾತ್ಕಾಲಿಕ ತಡೆ ನೀಡಿದೆ.

     ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿರುವ ಎರಡು ಪ್ರತ್ಯೇಕ ಕ್ರಿಮಿನಲ್‌ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು.

    ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿ ವಿ ನಾಗೇಶ್‌ ಅವರು ಪ್ರಕರಣಕ್ಕೆ ಅನ್ವಯಿಸದ ಕಾಯಿದೆಯ ವಿವಿಧ ಸೆಕ್ಷನ್‌ಗಳನ್ನು ಸೇರಿಸಿ, ಆರೋಪ ಪಟ್ಟಿ ಸಲ್ಲಿಸಲಾಗಿದೆ. ಇದು ಕಾನೂನಿಗೆ ವಿರುದ್ಧವಾಗಿವೆ. ಆರೋಪಗಳಿಗೆ ಸಂಬಂಧಿಸಿದಂತೆ ಚಿತ್ರದುರ್ಗದ ವಿಶೇಷ ನ್ಯಾಯಾಲಯವು 2023ರ ಏಪ್ರಿಲ್‌ 20ರಂದು ಶರಣರ ವಿರುದ್ಧ ಆರೋಪ ಹೊರಿಸಿ ಸಾಕ್ಷಿ ವಿಚಾರಣೆ ನಡೆಸಲು ಆದೇಶಿಸಿದೆ. ಈ ಆದೇಶ ದೋಷಪೂರಿತವಾಗಿದ್ದು ಇದಕ್ಕೆ ತಡೆ ನೀಡಬೇಕು ಎಂದು ಕೋರಿದರು.

   ವಕೀಲ ಕೆ ಬಿ ಕೆ ಸ್ವಾಮಿ ಅವರು ಅಡ್ವೊಕೇಟ್‌ ಆನ್‌ ರೆಕಾರ್ಡ್‌ ಆಗಿದ್ದಾರೆ ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯಿದೆ–2012, ಭಾರತೀಯ ದಂಡ ಸಂಹಿತೆ–1860, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯಿದೆ-1988, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೇಲಿನ ದೌರ್ಜನ್ಯ ತಡೆ ಕಾಯಿದೆ–1989 ಮತ್ತು ಬಾಲ ನ್ಯಾಯ (ಮಕ್ಕಳ ಸಂರಕ್ಷಣೆ ಹಾಗೂ ಆರೈಕೆ) ಕಾಯಿದೆ–2015ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದ್ದು, ವಿಶೇಷ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link