ಗುಬ್ಬಿ
ಶಾಂತಿ ಮತ್ತು ಸೌಹಾರ್ಧತೆಯಿಂದ ಆಚರಿಸುವ ಪವಿತ್ರ ಬಕ್ರೀದ್ ಹಬ್ಬವನ್ನು ಪಟ್ಟಣದ ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಆಚರಿಸಿದರು.
ತಾಲ್ಲೂಕಿನಾದ್ಯಂತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬದ ಅಂಗವಾಗಿ ಹೊಸಬಟ್ಟೆ ತೊಟ್ಟು ಪರಸ್ಪರ ಶುಭಾಶಯಗಳನ್ನು ಕೋರಿ ಹಬ್ಬ ಆಚರಿಸಿಕೊಂಡರು. ಪಟ್ಟಣದ ಮುಸ್ಲಿಂ ಬಾಂಧವರು ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬ ಆಚರಿಸದರೆ ತಾಲ್ಲೂಕಿನ ಸಿ.ಎಸ್.ಪುರ, ಕೆ.ಜಿ.ಟೆಂಪಲ್, ಚಾಕೇನಹಳ್ಳಿ, ಕುನ್ನಾಲ, ಇಸ್ಲಾಂಪುರ, ಕಿಟ್ಟದಕುಪ್ಪೆ, ಕಡಬ, ಚೇಳೂರು, ಹಾಗಲವಾಡಿ ಸೇರಿದಂತೆ ವಿವಿಧ ಕಡೆಗಳಲ್ಲಿ ಈದ್ಗಾ ಮೈದಾನಗಳಿಗೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಬಕ್ರೀದ್ ಹಬ್ಬವನ್ನು ಆಚರಿಸಿಕೊಂಡರು.
ಸಾಮೂಹಿಕ ಪ್ರಾರ್ಥನೆಯಲ್ಲಿ ಮುಸ್ಲಿಂ ಮುಖಂಡರು ಮತ್ತು ಮುಸ್ಲಿಂ ಬಾಂಧವರು ಭಾಗವಹಿಸಿದ್ದರು.
![](https://prajapragathi.com/wp-content/uploads/2018/08/photo1-5.jpg)