ಮೇಕೆ ದಾಟು ಒಂದು ಕೆಟ್ಟ ಯೋಜನೆ : ಚೇತನ್‌ ಅಹಿಂಸಾ

ಬೆಂಗಳೂರು 

      ಕರ್ನಾಟಕ ಸರ್ಕಾರದ ಉದ್ದೇಶಿದ ಮೇಕೆದಾಟು ಯೋಜನೆಗೆ ಕುರಿತು ಪರ ವಿರೋಧ ಚರ್ಚೆಯ ನಡುವೆ ನಟ ಚೇತನ್‌ ಅಹಿಂಸಾ ವಿರೋಧ ವ್ಯಕ್ತಪಡಿಸಿದ್ದು, ಇದೊಂದು ಕೆಟ್ಟ ಯೋಜನೆ ಎಂದು ಟೀಕಿಸಿದ್ದಾರೆ.

     ಈ ಕುರಿತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ನಟ ಚೇತನ್‌, ಮೇಕೆದಾಟು ಯೋಜನೆಗೆ ಅನುಮತಿ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ಇದೊಂದು ಕೆಟ್ಟ ಯೋಜನೆ..

     ವಿಪರ್ಯಾಸವೆಂದರೆ, ‘ಪರಿಸರ’ ಮತ್ತು ‘ಪ್ರವಾಹ ನಿರ್ವಹಣೆಯೇ ನಮ್ಮ ಸರ್ಕಾರವು ಜಯಿಸಲು ಪ್ರಯತ್ನಿಸುತ್ತಿರುವ ಮುಖ್ಯ ಸವಾಲುಗಳು (ಬ್ರಾಂಡ್ ಬೆಂಗಳೂರು).. ಮೇಕೆದಾಟು ಅಣೆಕಟ್ಟು ಪರಿಸರವನ್ನು ನಾಶಪಡಿಸುತ್ತದೆ. ಬೆಂಗಳೂರಿನ ಬಳಿಯ ಹಳ್ಳಿಗಳಲ್ಲಿ ಇದರಿಂದ ಪ್ರವಾಹ ಸಂಭವಿಸುತ್ತದೆ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

       ಬಜೆಟ್ ಮಂಡನೆಯ ವೇಳೆ ‘ಪ್ರತಿಪಕ್ಷದ ನಾಯಕನ ಛಾಯೆ’ ಆವರಿಸಿಕೊಂಡ ಸಿದ್ದರಾಮಯ್ಯ ಇನ್ನೂ ಮೇಕೆದಾಟು ಯೋಜನೆ ವಿಚಾರವಾಗಿ ಹಲವ ಪರ ವಿರೋಧ ಚರ್ಚೆಯಾಗಿದ್ದು, ಕರ್ನಾಟಕದ ಕುಡಿಯುವ ನೀರಿನ ಕೊರತೆ ನೀಗಿಸುವ ಉದ್ದೇಶದಿಂದ ಮೇಕೆದಾಟು ಯೋಜನೆ ಜಾರಿಗೆ ಸರ್ಕಾರ ದಶಕಗಳಿಂದ ಹರಸಾಹಸ ಪಡುತ್ತಿದ್ದು, ಈ ಮೇಕೆದಾಟು ಯೋಜನೆಯಿಂದ ಬೆಂಗಳೂರು ಭಾಗದ ಸುತ್ತಮುತ್ತಲಿನ ಪ್ರದೇಶದ ಜನರಿಗೆ ಕುಡಿಯುವ ನೀರಿನ ಕಲ್ಪಿಸಲು ಅನುಕೂಲ ಆಗಲಿದೆ.

     ಇತ್ತ ಮೇಕೆದಾಟು ಯೋಜನೆಗೆ ತಮಿಳುನಾಡಿನಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿವೆ. ಈ ಯೋಜನೆ ಜಾರಿಗೆ ಕುರಿತು ರಾಜ್ಯದ ಉಪಮುಖ್ಯಮಂತ್ರಿ ಡಿಕೆಶಿ ಶಿವಕುಮಾರ್ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಈ ಹಿಂದೆ ಸಂಗಮದಿಂದ ಬೆಂಗಳೂರಿನ ವರೆಗೂ ನೀರಿಗಾಗಿ ನಡಿಗೆ ಎಂದು ಡಿ ಕೆ ಶಿವಕುಮಾರ್‌ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆಯನ್ನ ನಡೆಸಿದ್ದು, ಯೋಜನೆಯನ್ನು ಅನುಷ್ಠಾನಕ್ಕೆ ತರಲು ಸರ್ಕಾರ ಪೂರ್ವ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ.

     ಇನ್ನೂ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ ಮಂಡಿಸಿದ್ದು, ಬಜೆಟ್‌ ನಲ್ಲಿ ಸಿದ್ದರಾಮಯ್ಯ ಮೇಕೆದಾಟು ಯೋಜನೆ ಬಗ್ಗೆ ಪ್ರಸ್ತಾಪ ಮಾಡಿದ್ದು, ಈ ಬಗ್ಗೆ ಪರ-ವಿರೋಧ ಚರ್ಚೆಯಾಗುತ್ತಿದೆ. ಬಜೆಟ್‌ ನಲ್ಲಿ ಮೇಕೆದಾಟು ಬಗ್ಗೆ ಪ್ರಸ್ತಾಪದ ಕುರಿತು ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಕುಮಾರ್ ಅಹಿಂಸಾ ವಿರೋಧ ವ್ಯಕ್ತಪಡಿಸಿದ್ದಾರೆ. ಗೌರಿ ಲಂಕೇಶ್ ಹತ್ಯೆಯ ಪ್ರಮುಖ ಆರೋಪಿಯ ಹೊಸ ಜಾಮೀನು ಅರ್ಜಿ ತಿರಸ್ಕರಿಸಿದ ಬೆಂಗಳೂರು ಕೋರ್ಟ್ ಈಗಾಗಲೇ ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ಹಗ್ಗಾಜಗ್ಗಾಟ ನಡೆದಿದ್ದು, ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸಿವ ಯೋಜನೆಯಾಗಿದ್ದರಿಂದ ತಮಿಳುನಾಡಿಗೆ ತೊಂದರೆಯಾಗುವುದಿಲ್ಲ.

      ಹೆಚ್ಚುವರಿ ನೀರು ಸಮುದ್ರಕ್ಕೆ ಸೇರುವ ಬದಲು ಸದ್ಭಳಕೆ ಮಾಡಿಕೊಳ್ಳಲಾಗುವುದು ಎಂಬು ಕರ್ನಾಟಕದ ವಾದವಾಗಿದೆ. ಇತ್ತ ಕರ್ನಾಟಕದ ವಾದಕ್ಕೆ ತಮಿಳುನಾಡು ಒಪ್ಪುತ್ತಿಲ್ಲ. ಹೀಗಿದ್ದರೂ ಶೀಘ್ರದಲ್ಲೇ ಭೂಸ್ವಾಧೀನ ಪ್ರಕ್ರಿಯೆಗಳನ್ನು ಜರುಗಿಸಲು ಆದ್ಯತೆ ಮೇರೆಗೆ ಕ್ರಮವಹಿಸಲಾಗುವುದು ಸಿಎಂ ಸಿದ್ಧರಾಮಯ್ಯ ಬಜೆಟ್‌ನಲ್ಲಿ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap