ಮೈತ್ರಿ ಕೂಟದ ಅಭ್ಯರ್ಥಿಗಳಿಗೆ ಗೆಲುವು ನಿಶ್ಚಿತ : ಡಿಕೆಶಿ

 ತಿಪಟೂರು:

      ರಾಜ್ಯದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿಕೂಟದಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಗೆಲುವು ದೊರೆಯಲಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಹೇಳಿದರು.

      ತಾಲ್ಲೂಕಿನ ನೊಣವಿನಕೆರೆ ಶ್ರೀ ಕಾಡಸಿದ್ದೇಶ್ವರ ಮಠದಲ್ಲಿ ಮಂಗಳವಾರ ನಡೆದ ನೂತನ ಶಿಲಾಮಠ ಲೋಕಾರ್ಪಣೆಗೊಂಡ ಪ್ರಯುಕ್ತ ವೈರಾಗ್ಯ ಸಿಂಹಾಸನಾಧೀಶ್ವರ ಶ್ರೀ ರಾವಲ್ ಪದವಿ ವಿಭೂಷಿತ ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದರ ಮಹಾ ಸಾನ್ನಿಧ್ಯದಲ್ಲಿ 108 ದಿನಗಳಿಂದ ನಡೆದು ಬಂದ ತ್ರಿಕೋಟಿ ಜಪಯಜ್ಞ ಮಂಗಲ ಮಹೋತ್ಸವದ ಹೋಮಹವನದಲ್ಲಿ ಭಾಗಿಯಾಗಿ ಅವರು ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ಸಮ್ಮಿಶ್ರ ಸರಕಾರ ಹಾಗೂ ಕುಟುಂಬದವರ ಹೆಸರಿನಲ್ಲಿ ಸಂಕಲ್ಪ ಮಾಡಿದರು.

      ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀ ಸೋಮೆಕಟ್ಟೆ ಕಾಡಸಿದ್ದೇಶ್ವರ ಮಠಕ್ಕೆ ಅಜ್ಜಯ್ಯನ ಭಕ್ತನಾಗಿ ಇಲ್ಲಿಗೆ ಬಂದಿದ್ದೇನೆ. ಇಲ್ಲಿಗೆ ಪ್ರತಿ ಬಾರಿ ಬಂದು ಹೋದ ನಂತರ ಮನಃಶಾಂತಿ ದೊರಕಿದೆ. ದೇವಾಲಯಕ್ಕೆ ಭಕ್ತರು ಬರುವ ಹಾಗೆ ನಾನು ಕೂಡ ಸಾಮಾನ್ಯರಲ್ಲಿ ಸಾಮಾನ್ಯನಂತೆ ಬಂದಿದ್ದೇನೆ ಎಂದರು.

      ಕಾರ್ಯಕ್ರಮದಲ್ಲಿ ಪೀಠಾಧ್ಯಕ್ಷರಾದ ಶ್ರೀ ಕರಿವೃಷಭದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ, ಮಾಜಿ ಶಾಸಕ ಬಿ.ನಂಜಾಮರಿ, ಜೆ.ಡಿ.ಎಸ್ ಕಾರ್ಯಾಧ್ಯಕ್ಷ ಶಿವಸ್ವಾಮಿ, ತಾ.ಪಂ. ಉಪಾಧ್ಯಕ್ಷ ಶಂಕರ್, ತಹಸೀಲ್ದಾರ್ ಡಾ.ವಿ ಮಂಜುನಾಥ್ ಮತ್ತಿತರರಿದ್ದರು.

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap