ಬೆಂಗಳೂರು:
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ರಾಜ್ಯದಲ್ಲಿ ನಡೆಸುತ್ತಿರುವ ಮೈತ್ರಿ ಸರ್ಕಾರಕ್ಕೆ ಯಾವುದೇ ರೀತಿಯ ಆತಂಕವಿಲ್ಲ ಎಂದು ಮಾಜಿ ಪ್ರದಾನಿ ಹೆಚ್.ಡಿ.ದೇವೇಗೌಡ ಅವರು ಸ್ಪಷ್ಟಪಡಿಸಿದರು.
ಇನ್ನು 15 ದಿನ ಮೈತ್ರಿ ಸರ್ಕಾರದ ಆಯಸ್ಸು ಎಂಬ ಕೆಲವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಪಕ್ಷಕ್ಕೆ ಅಧಿಕಾರ ಬಿಟ್ಟುಕೊಡಲು ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಮನಸ್ಸಿಲ್ಲ ಈ ಕಾರಣದಿಂದಾಗಿ ಈ ಉಭಯ ಪಕ್ಷಗಳು ಸರ್ಕಾರವನ್ನು ನಿರಾಳವಾಗಿ ನಡೆಸಲಿವೆ ಎಂದು ಅವರು ಹೇಳಿದರು.
ಸರ್ಕಾರದಲ್ಲಿ ಯಾವುದೇ ರೀತಿಯ ಲೋಪ-ದೋಷಗಳು ಕಂಡಿಲ್ಲ. ಆಕಸ್ಮಿಕವಾಗಿ ಪಕ್ಷಗಳ ನಾಯಕರ ಆಂತರಿಕ ಸಣ್ಣ-ಪುಟ್ಟ ತಪ್ಪುಗಳಿದ್ದಲ್ಲಿ ಇಂದು ನಡೆಯುವ ಸಮನ್ವಯ ಸಮಿತಿ ಸಭೆಯಲ್ಲಿ ಎಲ್ಲಾ ನಿವಾರಣೆಯಾಗಲಿದೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ