ಮುಂಬೈ:
ಮಹಾರಾಷ್ಟ್ರದ ಪ್ರಮುಖ ಪಕ್ಷಗಳಲ್ಲಿ ಒಂದಾದ ಮಹಾರಾಷ್ಟ್ರ ನವನಿರ್ಮಾಣ ಸೇನೆ ಅಧ್ಯಕ್ಷ ರಾಜ್ ಠಾಕ್ರೆ ಅವರು ತಮ್ಮ ಮಗನ ಮದುವೆಗೆ ರಾಹುಲ್ ಗಾಂಧಿ, ಶರದ್ ಪವಾರ್, ಸುಶೀಲ್ ಕುಮಾರ್ ಶಿಂಧೆ ಮುಂತಾದ ನಾಯಕರಿಗೆ ಆಹ್ವಾನ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.
ಲೋಕಸಭಾ ಚುನಾವಣೆಯಲ್ಲಿ ಎನ್ಸಿಪಿ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವ ಎಂಎನ್ ಎಸ್ ಮುಖ್ಯಸ್ಥ ರಾಜ್ ಠಾಕ್ರೆ ತಮ್ಮ ಮಗನ ಮದುವೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಹ್ವಾನ ನೀಡಿಲ್ಲ. ಕನಿಷ್ಠ ಪಕ್ಷ ವಿವಾಹ ಆಮಂತ್ರಿತರ ಪಟ್ಟಿಯಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿಲ್ಲ ಎಂದು ತಿಳಿದು ಬಂದಿದೆ .