ಬೆಂಗಳೂರು:
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬಳಿಕ ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪಗಳು ಮುಂದುವರಿದಿದೆ. ನಾಯಕರ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಮಾಜಿ ಸಚಿವ ರೇಣುಕಾಚಾರ್ಯ ಸೇರಿದಂತೆ ಹಲವರಿಗೆ ಬಿಜೆಪಿ ಶಿಸ್ತುಪಾಲನಾ ಸಮಿತಿಯಿಂದ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ..
ಇದರ ಬೆನ್ನಲ್ಲೇ ಇಂದು ರೇಣುಕಾಚಾರ್ಯ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಬೆಂಗಳೂರಿನ ಅವರ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.
ನಿನ್ನೆ ಬಿಜೆಪಿ ನಾಯಕರರ ಸಭೆಯಲ್ಲಿ ಪಕ್ಷಕ್ಕೆ ಮುಜುಗರ ತರುವಂತೆ ಹೇಳಿಕೆ ನೀಡುವವರನ್ನು ಕರೆದು ಮಾತನಾಡುವ ಜವಾಬ್ದಾರಿಯನ್ನು ಬಿ.ಎಸ್.ಯಡಿಯೂರಪ್ಪ ಅವರಿಗೆ ನೀಡುವ ನಿರ್ಣಯವನ್ನು ಕೈಗೊಂಡಿತ್ತು.