ಯಾದಗಿರಿ:
ಕಳೆದ ಕೆಲ ವಾರಗಳಿಂದ ದಕ್ಷಿಣಭಾರತದಲ್ಲಿ ಆಗುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಜೀವನಾಡಿಯಾಗಿರುವ ಬಸವಸಾಗರ ಜಲಾಶಯ ಭರ್ತಿಯಾಗಿದ್ದು, ಜಲಾಶಯದ ಸುರಕ್ಷೆಯ ದೃಷ್ಠಿಯಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಜಲಾಶಯದಿಂದ ಹರಿಸುತ್ತಿರುವ ಭಾರಿಪ್ರಮಾಣದ ನೀರಿನಿಂದ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದ್ದು, ನದಿ ಪಾತ್ರದ ಗ್ರಾಮ ನೀಲಕಂಠರಾಯನಗಡ್ಡಿ ಈಗಾಗಲೇ ನಡುಗಡ್ಡೆಯಾಗಿದ್ದು. ಸುರಪುರ ತಾಲೂಕಿನ ನಾರಾಯಣಪುರ ಗ್ರಾಮದ ಸಮೀಪವಿರುವ ಬಸವಸಾಗರ ಜಲಾಶಯ ಮಹಾರಾಷ್ಟ್ರದಲ್ಲಿ ಸುರಿದ ಭಾರೀ ಮಳೆಗೆ ಅಲ್ಲಿನ ಕೊಯ್ನ ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರನ್ನು ಬಿಡುಗಡೆ ಮಾಡಿದ್ದರ ಪರಿಣಾಮ ಜಲಾಶಯದ ಒಳಹರಿವು ಹೆಚ್ಚಿದ್ದ ಕಾರಣ ಜಲಾಶಯ ಭರ್ತಿಯಾಗಿದೆ .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
