ಬೆಂಗಳೂರು:
ಯಾವುದೇ ಕಾರಣಕ್ಕೂ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಮೇಯವೇ ಇಲ್ಲ. ಈಗ ಕೇಳಿ ಬರುತ್ತಿರುವ ಸುದ್ದಿಗಳು ಕೇವಲ ವದಂತಿ ಎಂದು ಶಾಸಕ ಕೆ.ಗೋಪಾಲಯ್ಯ ಹೇಳಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳಿಂದ ಗೋಪಾಲಯ್ಯ ಅವರು ಬಿಜೆಪಿ ಬಿಟ್ಟು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿಗಳು ಕೇಳಿಬರುತ್ತಿದ್ದವು. ಈ ಸಂಬಂಧ ಪ್ರತಿಕ್ರಿಯೆ ನೀಡಿದ ಗೋಪಾಲಯ್ಯ ಅವರು ನಾನು ಕನಸಿನಲ್ಲೂ ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಯೋಚನೆಯಾಗಿಲ್ಲ. ಮಾಧ್ಯಮಗಳಲ್ಲಿ ನನ್ನ ಬಗ್ಗೆ ಇಂತಹ ಹುಸಿ ಸುದ್ದಿ ಏಕೆ ಬರುತ್ತವೆಯೋ ಗೊತ್ತಿಲ್ಲ. ನಾನಂತೂ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ಕಾರ್ಯಕರ್ತರು ಹಾಗೂ ಮುಖಂಡರು ಗೊಂದಲಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದರು.
ಬಿಜೆಪಿಯನ್ನು ನಂಬಿ ಸೇರ್ಪಡೆಯಾಗಿದ್ದೆ. ಉಪಚುನಾವಣೆ ಹಾಗೂ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಮತದಾರರು ನನಗೆ ಹೆಚ್ಚಿನ ಬಹುಮತ ನೀಡಿ ನನ್ನನ್ನು ಆಯ್ಕೆ ಮಾಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಪರಿಸ್ಥಿತಿ ನನಗೆ ಬಂದಿಲ್ಲ. ಸುಖಾ ಸುಮ್ಮನೆ ಗೊಂದಲ ಸೃಷ್ಟಿಸುವ ಕೆಲಸವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
