ನವದೆಹಲಿ:
ರಫೇಲ್ ಯುದ್ಧ ವಿಮಾನ ಖರೀದಿಸಲು ಕೈಗೊಂಡ ನಿರ್ಧಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕೇಂದ್ರ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್ ಕಾರ್ಯದರ್ಶಿಗಳಿಗೆ ಶನಿವಾರ ಸಲ್ಲಿಸಿದೆ.
ಸಾಕಷ್ಟು ರಾಜಕೀಯ ಕೆಸರೆರಚಾಟ ಕಂಡ ಡೀಲ್ ಕುರಿತಂತೆ ಕೇಂದ್ರ ಸರಕಾರದಿಂದ ಮಾಹಿತಿಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಧೀಶ ರಂಜನ್ ಗೊಗೋಯ್ ಕೋರಿದ್ದರು. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಯ್ ನೇತೃತ್ವದ ಪೀಠ, ರಫೇಲ್ ಯುದ್ಧ ವಿಮಾನದ ಬೆಲೆ ಹಾಗೂ ತಾಂತ್ರಿಕ ವಿವರಗಳನ್ನು ಬಹಿರಂಗಪಡಿಸಿದೆ, ವಿಚಾರಣೆಯನ್ನು ಅಕ್ಟೋಬರ್ 29ಕ್ಕೆ ಮುಂದೂಡಿದೆ.
“ರಫೇಲ್ ಡೀಲ್ ಕುರಿತಂತೆ ವಿವಿಧ ಹಂತಗಳ ಪ್ರಕ್ರಿಯೆಗಳ ಸವಿವರವಾದ ಮಾಹಿತಿ ಪಡೆಯಲು ಇಚ್ಛಿಸುತ್ತೇವೆ. ಕೇಂದ್ರದ ಪ್ರತಿಕ್ರಿಯೆಯಲ್ಲಿ ಬೆಲೆಯ ಕುರಿತಂತೆ ಬಹಿರಂಗಪಡಿಸುವ ಅಗತ್ಯವಿಲ್ಲ” ಎಂದು ಸುಪ್ರೀಂ ಇದೇ ವೇಳೆ ತಿಳಿಸಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ