ಮೈಸೂರು:
ಕಾಂಗ್ರೆಸ್ ನಿಂದ ಲೋಕಸಭಾ ಚುನಾವಣೆಗೆ ಮುನ್ನವೇ ಆಪರೇಷನ್ ಹಸ್ತ ಶುರುವಾಗಿದೆ. ಇದರ ಮೊದಲ ಭಾಗ ಎನ್ನುವಂತೆ ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಬಿಜೆಪಿಯ ಹಲವರು ನಾಯಕರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಈ ಬೆನ್ನಲ್ಲೇ ಆಪರೇಷನ್ ಹಸ್ತಕ್ಕೆ ಮಾಜಿ ಸಚಿವ ತನ್ವೀರ್ ಸೇಠ್ ವಿರೋಧ ವ್ಯಕ್ತ ಪಡಿಸಿದ್ದು, ರಾಜಕೀಯ ನಿವೃತ್ತಿಗೂ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು ಈಗಿನ ರಾಜಕೀಯ ಸನ್ನಿವೇಶ, ಪರಿಸ್ಥಿತಿ ಯಾವುದೂ ಸರಿಯಿಲ್ಲ. ಹೀಗಾಗಿ ನಾನು ರಾಜಕೀಯ ನಿವೃತ್ತಿಗೆ ಮುಂದಾಗಿದ್ದೇನೆ ಎಂದಿದ್ದಾರೆ. ಈ ಮೂಲಕ ಆಪರೇಷನ್ ಹಸ್ತಕ್ಕೆ ಪರೋಕ್ಷವಾಗಿ ಅವರು ಅಸಮಾಧಾನ ಹೊರ ಹಾಕಿದ್ದಾರೆ.
ಇನ್ನೂ ಮುಂದುವರೆದು ಮಾತನಾಡಿದಂತ ಅವರು ಪಕ್ಷಾಂತರ ಮಾಡುವವರ ವಿರುದ್ಧ ಎಷ್ಟೇ ಕಾನೂನು ಬಿಗಿ ಮಾಡಿದರೂ ರಾಜೀನಾಮೆ ನೀಡಿ, ಚುನಾವಣೆಗೆ ಹೋಗುವವರಿಗೆ ಏನೂ ಮಾಡೋದಕ್ಕೆ ಆಗುತ್ತಿಲ್ಲ. ನಾವು ಯಾವುದೇ ಆಪರೇಷನ್ ಗೆ ಕೈಹಾಕಲ್ಲ. ನಮಗೆ ರಾಜ್ಯದ ಜನತೆ 135 ಸ್ಥಾನ ಕೊಟ್ಟಿದ್ದಾರೆ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಅವರನ್ನು ಎಸ್ ಟಿ ಸೋಮಶೇಖರ್ ಭೇಟಿಯ ವಿಚಾರವಾಗಿ ಮಾತನಾಡಿದ ಅವರು, ಕ್ಷೇತ್ರದ ಕೆಲಸದ ನಿಮಿತ್ತ ಸಿಎಂ ಭೇಟಿಯಾಗಿದ್ದಾರೆ. ಅವರು ಪಕ್ಷ ಸೇರುವ ಊಹಾಪೋಹದ ವಿಚಾರಕ್ಕೆ ಸೋಮಶೇಖರ್ ಅವರೇ ಉತ್ತರ ಕೊಡಬೇಕು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ