ರಾಜಕೀಯ ಪ್ರೇರಿತ ರೀವರ್ಸ್ ಗೇರ್ ಬಜೆಟ್ : ಬಸವರಾಜ ಬೊಮ್ಮಾಯಿ

ಬೆಂಗಳೂರು:

    ಬಜೆಟ್ ನಲ್ಲಿ ಭವಿಷ್ಯದ ಯೋಜನೆಗಳ ಕುರಿತು ಹೇಳುವ ಬದಲು, ಹಿಂದಿನ ಸರ್ಕಾರ ಹಾಗೂ ಕೇಂದ್ರ ಸರ್ಕಾರವನ್ನು ದ್ವೇಷಿಸುವ ರಾಜಕೀಯ ಪ್ರೇರಿತ, ರಿವರ್ಸ್ ಗೇರ್ ಬಜೆಟ್ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

    ರಾಜ್ಯ ಸರ್ಕಾರದ ಬಜೆಟ್ ಕುರಿತು ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು, ಇವತ್ತಿನ ಹಣಕಾಸಿನ ಸ್ಥಿತಿ, ಇವತ್ತಿನ ವಾಸ್ತವ ಸ್ಥಿತಿ ಬಗ್ಗೆ ಮಾತನಾಡುವ ಬದಲು ಹಳೆಯ ಕಾರ್ಯಕ್ರಮಗಳ ಬಗ್ಗೆ ಹೇಳುತ್ತಾರೆ ಎಂದರೆ, ಅವರು ಭೂತಕಾಲದಲ್ಲಿದ್ದಾರೆ. ಇದು ರಾಜಕೀಯ ಬಜೆಟ್. ಹಲವಾರು ಅಂಕಿ ಅಂಶಗಳನ್ನು ಆ ಸಂದರ್ಭಕ್ಕೆ ವಾಸ್ತವಾಂಶಕ್ಕೆ ತಕ್ಕಂತೆ ಎಲ್ಲ ಸರ್ಕಾರಗಳು ಮಾಡಿವೆ. ಪ್ರತಿಯೊಂದಕ್ಕೂ 2013 ಕ್ಕೆ ಹೋಲಿಕೆ ಮಾಡಿದ್ದಾರೆ. ಅದನ್ನು ನೋಡಿದರೆ ಅವರು ಹೆಚ್ಚು ಸಾಲ ಮಾಡಿದ್ದಾರೆ. ಇದೊಂದು ರಿವರ್ಸ್ ಗೇರ್ ಇರುವ ಸರ್ಕಾರ ಆಗಿದೆ ಎಂದು ವಾಗ್ದಾಳಿ ನಡೆಸಿದರು.

    ರಾಜ್ಯಪಾಲರ ಭಾಷಣ ಮತ್ತು ಬಜೆಟ್ ವ್ಯತ್ಯಾಸ ನೋಡಿದರೆ ಇದೊಂದು ಸುಳ್ಳು ಹೇಳುವ ಸರ್ಕಾರ ಅಂತ ಗೊತ್ತಾಗಿದೆ. ಕೊವಿಡ್ ನಿರ್ವಹಣೆಯ ಬಗ್ಗೆ ಇಡೀ ವಿಶ್ವವೇ ಕೊಂಡಾಡಿದೆ. ನಮ್ಮ ರಾಜ್ಯದ ಕೊವಿಡ್ ನಿರ್ವಹಣೆಯ ಬಗ್ಗೆ ದೇಶವೇ ಕೊಂಡಾಡಿದೆ. ಕೇಂದ್ರ ಸರ್ಕಾರ ಕೊವಿಡ್ ಸಂದರ್ಭದಲ್ಲಿ ಸಾಕಷ್ಟು ಸಹಾಯ ಮಾಡಿದೆ. ನಮ್ಮ ಸರ್ಕಾರ ಕೂಡ ಸುಮಾರು 2000 ಕೋಟಿ ರೂ. ಕೊವಿಡ್ ನಿಂದ ಸಂಕಷ್ಟಕ್ಕೆ ಒಳಗಾದವರ ನೆರವಿಗೆ ನೀಡಿದ್ದೇವೆ.

    ನಾವು ಎಷ್ಟು ಹೆಚ್ಚು ತೆರಿಗೆ ಸಂಗ್ರಹ ಮಾಡಿದ್ದೇವೆ. ಕೇಂದ್ರ ಎಷ್ಟು ಅನುದಾನ ನೀಡಿದೆ ಎನ್ನುವುದು ದಾಖಲೆ ಇದೆ. ಕೇಂದ್ರದ ಅನುದಾನ ಕಡಿಮೆ ಆಗಿದೆ ಅಂತ ಹೇಳಿದ್ದಾರೆ. ಕೇಂದ್ರ ಸರ್ಕಾರ ಎರಡು ರೀತಿಯಲ್ಲಿ ಅನುದಾನ ನೀಡಲಿದೆ. ಕೆಲವು ಯೋಜನೆಗಳಲ್ಲಿ ನೇರವಾಗಿ ಫಲಾನುಭವಿಗಳಿಗೆ ಅನುದಾನ ದೊರೆಯುತ್ತದೆ ಅದನ್ನು ಮರೆಮಾಚುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

   ಈ ಬಜೆಟ್ ನೋಡಿದರೆ ಟೀಕೆ ಮಾಡುವುದಕ್ಕೆ ಹೆಚ್ಚಿನ ಸ್ಥಾನ ನೀಡಿದ್ದಾರೆ. ಗ್ಯಾರೆಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ವೆಚ್ಚವಾಗಲಿದೆ ಅಂತ ಹೇಳಿದ್ದಾರೆ. ಈಗಾಗಲೇ 6 ತಿಂಗಳು ಕಳೆದಿದೆ. ಈ ವರ್ಷ ಸುಮಾರು 25 ಸಾವಿರ ಕೊಟಿ ಮಾತ್ರ ಹೆಚ್ಚಿಗೆ ಬೇಕಾಗುತ್ತದೆ. ತೆರಿಗೆ ಹೆಚ್ಚಳ ಮಾಡುವ ಅಗತ್ಯವಿರಲಿಲ್ಲ ಎಂದರು.

ಸಾಮಾನ್ಯರ ಮೇಲೆ ಹೊರೆ

    ಗ್ಯಾರೆಂಟಿ ಯೋಜನೆಗಳ ಜಾರಿಯ ಹೆಸರಲ್ಲಿ ಈ ಬಜೆಟ್ ಸಾಮಾನ್ಯರ ಮೇಲೆ ದೊಡ್ಡ ಹೊರೆ ಹೊರೆಸಿದೆ. ನಮ್ಮದು 77 ಸಾವಿರ ಕೋಟಿ ಸಾಲ ಇದ್ದದ್ದು, ಈಗ 88 ಸಾವಿರ ಕೋಟಿಗೆ ಹೆಚ್ಚಿಸಿದ್ದಾರೆ. ಬಜೆಟ್ ಗಾತ್ರ 3.27 ಲಕ್ಷ ಕೋಟಿ ಮಾಡಿದ್ದಾರೆ. ನಾವು ಸರಪ್ಲಸ್ ಬಜೆಟ್ ಮಾಡಿದ್ದೇವು ಇವರು ಡೆಫಿಸಿಟ್ ಬಜೆಟ್ ಮಾಡಿದ್ದಾರೆ. ಯಾವುದೇ ಭರವಸೆ ನೀಡದೆ, ಜನರಿಗೆ ಸುಳ್ಳು ಬರವಸೆ ನೀಡಿದ್ದಾರೆ. ಶಿಕ್ಷಣ, ಆರೋಗ್ಯ, ಕೃಷಿ, ಪಿಡಬ್ಲುಡಿ, ನೀರಾವರಿ, ಯೋಜನೆಗಳಿಗೆ ಅನುದಾನ ಪ್ರಮಾಣ ಕಡಿಮೆ ಮಾಡಿದ್ದಾರೆ. ಹೆಚ್ಚಿನ ಅನುದಾನ ನೀಡದೆ ಅಭಿವೃದ್ಧಿ ಹೇಗೆ ಆಗುತ್ತದೆ ಎಂದು ಪ್ರಶ್ನಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap