ಬೆಂಗಳೂರು
ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ರಾಜ್ಯಕ್ಕೆ ಒಂದು ದಿನದ ಪ್ರವಾಸ ಹಮ್ಮಿಕೊಂಡಿದ್ದಾರೆ. ಮೈಸೂರು ಮತ್ತು ಧಾರವಾಡ ಜಿಲ್ಲೆಯಲ್ಲಿ ಸುಮಾರು 16 ಸಾವಿರ ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಮೊದಲಿಗೆ ಅವರು, ಮಂಡ್ಯಕ್ಕೆ ಭೇಟಿ ನೀಡಲಿದ್ದು, ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯನ್ನು ರಾಷ್ಟçಕ್ಕೆ ಸಮರ್ಪಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಮೈಸೂರು ಕುಶಾಲನಗರ 4 ಪಥದ ಹೆದ್ದಾರಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.
92 ಕೀಲೋಮೀಟರ್ ಉದ್ದದ ಈ ಹೆದ್ದಾರಿ ನಿರ್ಮಾಣ ಕಾಮಗಾರಿಯನ್ನು 4 ಸಾವಿರದ 130 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ. ನಂತರ ಹುಬ್ಬಳ್ಳಿ-ಧಾರವಾಡ ಭೇಟಿಯ ಸಮಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಧಾರವಾಡದಲ್ಲಿ ನಿರ್ಮಾಣಗೊಂಡಿರುವ ಭಾರತೀಯ ತಾಂತ್ರಿಕ ಸಂಸ್ಥೆ ಐಐಟಿಯನ್ನು-ರಾಷ್ಟçಕ್ಕೆ ಸಮರ್ಪಿಸಲಿದ್ದಾರೆ.
ಅಲ್ಲದೆ, ವಿಶ್ವದ ಅತಿದೊಡ್ಡ ರೈಲ್ವೆ ಫ್ಲಾಟ್ ಫಾರ್ಮ್ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ನಿಲ್ದಾಣವನ್ನು ರಾಷ್ಟçಕ್ಕೆ ಸಮರ್ಪಿಸಲಿದ್ದಾರೆ. ಬಳಿಕ ಹೊಸಪೇಟೆ-ಹುಬ್ಬಳ್ಳಿ ವಲಯದ ರೈಲ್ವೆ ಮೇಲ್ದರ್ಜೆ ಯೋಜನೆ ವಿದ್ಯುದ್ದೀಕರಣಗೊಳಿಸುವ ಕಾರ್ಯಕ್ಕೂ ಪ್ರಧಾನಿ ಚಾಲನೆ ನೀಡಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
