ಬೆಂಗಳೂರು
ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಬಹುತೇಕ ಕಡೆ ಬರದ ಛಾಯೆ ಆವರಿಸಿಕೊಂಡಿದೆ. ಇದರಿಂದ ರೈತರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಕೆಲವು ಕಡೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಇದರ ಬಗ್ಗೆ ನಿಲುವಳಿ ಸೂಚನೆ ಮಂಡಿಸಿದ್ದು, ಚರ್ಚೆಗೆ ಅವಕಾಶ ಕೊಡಬೇಕೆಂದು ಬಿಜೆಪಿಯ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿಂದು ಒತ್ತಾಯಿಸಿದರು.
ಮುಂಗಾರು ಮಳೆ ಕೊರತೆಯಿಂದ ರಾಜ್ಯದ ಬಹುತೇಕ ಕಡೆ ಬರಪರಿಸ್ಥಿತಿ ಉಂಟಾಗಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಬಿತ್ತನೆಯಾಗಿಲ್ಲ, ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದಲ್ಲಿ ವಾಡಿಕೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ ಹಾಗೂ ಬಿತ್ತನೆಯಾಗಿಲ್ಲ. ಸಿದ್ದಮಾಡಿಕೊಂಡಿದ್ದ ಬಿತ್ತನೆ ಬೀಜವನ್ನು ರೈತರು ಹೊಲ-ಗದ್ದೆಗಳಲ್ಲಿ ಬಿತ್ತನೆ ಮಾಡಿದ್ದಾರೆ.
ಸಕಾಲಿಕವಾಗಿ ಬಿತ್ತನೆ ಮಾಡದ ಕಾರಣ ಬೆಳೆಗಳು ಸರಿಯಾಗಿ ಫಸಲು ನೀಡುವುದಿಲ್ಲ. ರಾಜ್ಯದ ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಸಮಸ್ಯೆ ಬಗೆಹರಿಸಲು ಸಿಇಓಗಳ ಬಳಿ ಒಂದು ಕೋಟಿ ರೂಪಾಯಿ ಇದೆ ಎಂದು ಸರ್ಕಾರ ಹೇಳಿದೆ. ಇದು ಸಾಲುವುದಿಲ್ಲ. ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೆ ಒಂದು ಕೋಟಿಯನ್ನಾದರೂ ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
