ರಾಜ್ಯದಲ್ಲಿ ಹಿಂದುಳಿದ ವರ್ಗಗಳ ವಕೀಲರ ಸಂಘ ಅಸ್ತಿತ್ವ ಸಂಜೆ 4 ಗಂಟೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಿಂದ ಉದ್ಘಾಟನೆ

 

ಬೆಂಗಳೂರು : ರಾಜ್ಯ ಮಟ್ಟದಲ್ಲಿ ಹಿಂದುಳಿದ ವರ್ಗಗಳ ವಕೀಲರ ಸಂಘ ಸ್ಥಾಪನೆ ಮಾಡಲಾಗುತ್ತದೆ ಹಾಗೂ ಈ ಕಾರ್ಯಕ್ರಮವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರವರು ಉದ್ಘಾಟಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವಕೀಲರ ಸಂಘ ತಿಳಿಸಿದೆ.

ಶುಕ್ರವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಜೆ 4ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ.
ರಾಜ್ಯಾದ್ಯಾಂತ ಹಿಂದುಳಿದ ವರ್ಗಗಳ ವಕೀಲರು ಸೇರಿ ಈ ಸಂಘವನ್ನು ಸ್ಥಾಪನೆ ಮಾಡಲಾಗಿದೆ, ರಾಜ್ಯಾದ್ಯಂತ ಸಾವಿರಾರು ವಕೀಲರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿದ್ದಾರೆ. ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವಕೀಲರ ಸಂಘದ ಅಧ್ಯಕ್ಷ ಸುರೇಶ್ ಎಮ್. ಲಾತೂರ್, ಪ್ರಧಾನಕಾರ್ಯದರ್ಶಿ ಸುಭಾಷ್ ಕೆ.ಆರ್. ಖಜಾಂಚಿ ನವೀನ್ ಚೆಲ್ಲಾಳ ಸೇರಿದಂತೆ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕಾರ್ಯಕ್ರಮದ ಅತಿಥಿಗಳಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ಸಮಾಜ ಕಲಾಣ ಮಂತ್ರಿಗಳಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಪ್ರವಾಸೋದ್ಯಮ ಸಚಿವರಾದ ಶ್ರೀ ಆನಂದ್ ಸಿಂಗ್ ನ್ಯಾಯಾಧೀಶರಾದ ಶ್ರೀ. ಬಿಳಜಿ, ಮುಂತಾದವರು ಭಾಗವಹಿಸಲಿದ್ದಾರೆ.

Recent Articles

spot_img

Related Stories

Share via
Copy link