ಬೆಂಗಳೂರು :
ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪರಿಸ್ಥಿತಿ ಬಂದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ಒಂದು ವರ್ಷದ ಅವಧಿಯಲ್ಲಿ ಸಾಕಷ್ಟು ಪಾಠಗಳನ್ನು ಕಲಿತಿದ್ದೇವೆ. ಕಳೆದ ಬಾರಿ ಲಸಿಕೆ ಇರಲಿಲ್ಲ. ಚಿಕಿತ್ಸೆ ನೀಡೋದು ಗೊತ್ತಿರಲಿಲ್ಲ. ಆದರೆ ಈ ಬಾರಿ ಲಸಿಕೆ ಇದೆ. ಚಿಕಿತ್ಸೆ ನೀಡೋದು ಗೊತ್ತಿದೆ. ಹೀಗಾಗಿ ಜನರು ಆತಂಕ ಪಡುವ ಅಗತ್ಯ ಇಲ್ಲ. ಕೊರೊನಾ ವೈರಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್, ಸೀಲ್ ಡೌನ್, ನೈಟ್ ಕರ್ಪ್ಯೂ ಜಾರಿ ಮಾಡಲ್ಲ. ಕೊರೊನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ವಿಚಾರ ಚರ್ಚೆಗೆ ಬಂದಿತ್ತು. ಈ ಬಗ್ಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ