ಬೆಂಗಳೂರು:

ಐದು ಜಿಲ್ಲೆಗಳಲ್ಲಿ ಚುನಾವಣಾ ನೀತಿ ಸಂಹಿತತೆ ಇರುವುದರಿಂದ ರಾಜ್ಯೋತ್ಸವ ಪ್ರಶಸ್ತಿಯನ್ನು ನವೆಂಬರ್ 3ರ ಬಳಿಕ ಪ್ರಕಟಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಪ್ರತಿ ವರ್ಷ ನವೆಂಬರ್ 1ರಂದು ನೀಡುವ ರಾಜ್ಯೋತ್ಸವ ಪ್ರಶಸ್ತಿ ಕುರಿತು ಕೇವಲ ಒಂದು ದಿನ ಬಾಕಿ ಇದ್ದರೂ ಇದುವರೆಗೂ ಪ್ರಶಸ್ತಿಗೆ ಆಯ್ಕೆಯಾಗಿರುವವರ ಹೆಸರನ್ನು ಪ್ರಕಟಿಸಿಲ್ಲ ಅಷ್ಟೇ ಅಲ್ಲದೆ ಇದುವರೆಗೆ ಸುಮಾರು 2 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಬುಧವಾರ ಈ ಕುರಿತು ಸಭೆ ರದ್ದುಗೊಳಿಸಿರುವ ಕುಮಾರಸ್ವಾಮಿ ಚುನಾವಣೆ ಮುಗಿದ ಬಳಿಕ ಹೆಸರು ಪ್ರಕಟಿಸುವುದಾಗಿ ತಿಳಿಸಿದ್ದಾರೆ.
ನಾಳೆ ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಬೇಕಿತ್ತು. ಆದರೆ ಐದು ಜಿಲ್ಲೆಗಳಲ್ಲಿ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಪ್ರಶಸ್ತಿ ಘೋಷಣೆ ರದ್ದು ಪಡಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








