ಶಿರಾ
ಗುಳಿಗೇನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಹೆಚ್.ಎಸ್.ಉಮಾಶಂಕರ್ ಅವರು ಮಧುಗಿರಿಯಲ್ಲಿ ನಡೆದ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರಧರ್ಶನದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಧುಗಿರಿಯಲ್ಲಿ ನಡೆದ ಸಮಾರಂಭದಲ್ಲಿ ಆಯ್ಕೆಗೊಂಡ ಪತ್ರವನ್ನು ನೀಡಿ ಗೌರವಿಸಲಾಯಿತು. ಉಪ ಪ್ರಾಂಶುಪಾಲ ಆನಂದಪ್ಪ ಸೇರಿದಂತೆ ಶಾಲಾ ಸಿಬ್ಬಂಧಿ ಈ ಸಂದರ್ಬದಲ್ಲಿ ಹಾಜರಿದ್ದರು.